ಸೆಗಣಿ, ಟೊಮೆಟೋ ಎಸೆದು ಬಿಜೆಪಿ ಪ್ರತಿಭಟನೆ!
Team Udayavani, Jan 30, 2018, 9:12 AM IST
ಹಾವೇರಿ: ವಿವಿಧ ಬೇಡಿಕೆ ಈಡೇರಿಕೆಗಾಗಿ ಜಿಲ್ಲಾಡಳಿತ ಭವನದತ್ತ ಸಗಣಿ, ಟೊಮೆಟೋ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಜಿಲ್ಲಾಧಿಕಾರಿ ಕಚೇರಿಯತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾ ನಿರತ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು.
ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಮೆಕ್ಕೆ ಜೋಳ ಖರೀದಿ ಕೇಂದ್ರ ಸ್ಥಾಪಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು. ಆಗ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಪೊಲೀಸರು ಹರಸಾಹಸ ಪಟ್ಟರು. ಈ ವೇಳೆ ನಡೆದ ನೂಕಾಟದಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಅವರ ಕಣ್ಣಿಗೆ ಪೊಲೀಸರ ಲಾಠಿ ತಗುಲಿ ಗಾಯವಾಯಿತು. ಕಾರ್ಯಕರ್ತರು ಎಸೆದ ಸೆಗಣಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳಿಗೂ
ಸಿಡಿಯಿತು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸೇರಿ 70ಕ್ಕೂ ಹೆಚ್ಚು ಜನರನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ