ನ್ಯಾಯಮಂಡಳಿ ಅವಧಿ ವಿಸ್ತರಣೆಗೆ ಅವಕಾಶ ಬೇಡ


Team Udayavani, Feb 9, 2018, 6:00 AM IST

180208kpn69.jpg

ಬೆಂಗಳೂರು: ಮಹದಾಯಿ ವಿವಾದ ಕುರಿತು ರಚನೆಯಾಗಿರುವ ನ್ಯಾಯಮಂಡಳಿಯ ಅವಧಿಯನ್ನ ಮತ್ತೂಂದು ವರ್ಷ ವಿಸ್ತರಿಸಬೇಕೆನ್ನುವ ಗೋವಾ ಮನವಿಗೆ ಪ್ರಬಲವಾಗಿ ವಿರೋಧ ವ್ಯಕ್ತಪಡಿಸಲು ಹಾಗು ನ್ಯಾಯಾಧಿಕರಣ ಅವಧಿ ವಿಸ್ತರಣೆಗೆ ಅವಕಾಶ ಕಲ್ಪಿಸದಿರಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ವಿಧಾನಮಂಡಲದ ಉಭಯ ಸದನಗಳ ನಾಯಕರ ಜೊತೆ ಗುರುವಾರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೋವಾ ಸರ್ಕಾರ ಮಹದಾಯಿ ನ್ಯಾಯ ಮಂಡಳಿಯ ಅವಧಿಯನ್ನು ಮತ್ತೂಂದು ವರ್ಷ ವಿಸ್ತರಣೆ ಮಾಡುವಂತೆ ಕೇಳಿಕೊಂಡಿದೆ ಎಂದು ತಿಳಿಸಿದರು.ಒಂದೊಮ್ಮೆ ನ್ಯಾಯಮಂಡಳಿ ಅವಧಿ ವಿಸ್ತರಣೆಯಾದರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ ಎಂದು ತಿಳಿಸಿದಾಗ ನ್ಯಾಯಾಧಿಕರಣದಲ್ಲಿ ಗೋವಾ ಮನವಿಗೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯಕ್ಕಕ್ಕಾಗುವ ಅನ್ಯಾಯ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹದಾಯಿ ವಿವಾದ ಬಗೆಹರಿಸಲು 2010 ರಲ್ಲಿ ನ್ಯಾಯಮಂಡಳಿ ರಚನೆ ಮಾಡಲಾಗಿದೆ. ನ್ಯಾಯಮಂಡಳಿ ಮೂರು ವರ್ಷದಲ್ಲಿ ವರದಿ ನೀಡಬೇಕು. ಆದರೆ, ಮಹದಾಯಿ ನ್ಯಾಯಮಂಡಳಿಯನ್ನು ಎರಡು ಬಾರಿ ವಿಸ್ತರಿಸಲಾಗಿದೆ. ಕಾನೂನಿನಲ್ಲಿ ಎರಡು ಬಾರಿಗಿಂತ ಹೆಚ್ಚು ಸಮಯ ನ್ಯಾಯ ಮಂಡಳಿಯನ್ನು ವಿಸ್ತರಿಸಲು ಅವಕಾಶ ಇಲ್ಲ. ಹೀಗಾಗಿ ರಾಜ್ಯ ಸರ್ಕಾರವೂ ನ್ಯಾಯ ಮಂಡಳಿಯ ಅವಧಿ ವಿಸ್ತರಿಸದೇ ನಿಗದಿತ ಸಮಯದಲ್ಲಿಯೇ ಆದೇಶ ನೀಡುವಂತೆ ಕೇಳಿಕೊಳ್ಳಲು ನಿರ್ಧರಿಸಿದ್ದೇವೆ ಎಂದರು.

ಫೆಬ್ರವರಿ 6 ರಿಂದ ವಿವಾದದ ಕುರಿತು ಅಂತಿಮ ವಿಚಾರಣೆ ಆರಂಭವಾಗಿದೆ. ಫೆಬ್ರವರಿ 22 ರ ವರೆಗೂ ವಿಚಾರಣೆ ನಡೆಯಲಿದ್ದು, ಮೂರು ರಾಜ್ಯಗಳು ನ್ಯಾಯ ಮಂಡಳಿಯ ಮುಂದೆ ವಾದ ಮಂಡನೆಗೆ ಅವಕಾಶ ಇದೆ. ನಾವು ಯಾವುದೇ ಕಾರಣಕ್ಕೂ ಸಮಯ ವಿಸ್ತರಣೆಗೆ ಅವಕಾಶ ಕೊಡುವುದಿಲ್ಲ ಎಂದು ರಾಜ್ಯದ ಪರ ವಕೀಲರ ಮೂಲಕ ಕೋರ್ಟ್‌ಗೆ ತಿಳಿಸಲು ತೀರ್ಮಾನಿಸಿದ್ದೇವೆ. ನಿಗದಿಯಂತೆ ನ್ಯಾಯಮಂಡಳಿ 2018 ರ ಆಗಸ್ಟ್‌ 20 ರೊಳಗೆ ಆದೇಶ ನೀಡಬೇಕು ಎಂದರು.

ಅಂತಾರಾಜ್ಯ ನದಿ ವಿವಾದಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯಾವಾಗಲೂ ಪ್ರತಿಪಕ್ಷದವರ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನ ಕೈಗೊಳ್ಳುತ್ತದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳ ಸಹಮತ ಇದೆ ಎಂದು ಹೇಳಿದರು.

ಅಲ್ಲದೇ ಗೋವಾ ಸರ್ಕಾರ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ರಾಜ್ಯ ಸರ್ಕಾರ ಲಿಖೀತ ಅಫಿಡವಿಟ್‌ ಸಲ್ಲಿಸಿದೆ. ಯಾವುದೇ ನ್ಯಾಯಾಂಗ ನಿಂದನೆಯಾಗಿಲ್ಲ ಎಂದು ನ್ಯಾಯ ಮಂಡಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಹೇಳಿದರು.
ಅಶೋಕ್‌ ದೇಸಾಯಿ ನೇಮಕ: ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಹಿರಿಯ ನ್ಯಾಯವಾದಿ ಫಾಲಿ ಎಸ್‌. ನಾರಿಮನ್‌ ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ಜಾಗಕ್ಕೆ ಮಹರಾಷ್ಟ್ರದವರೇ ಆಗಿರುವ ಅಶೋಕ್‌ ದೇಸಾಯಿಯನ್ನು ರಾಜ್ಯ ಸರ್ಕಾರ ನೇಮಿಸಿದೆ. ಅವರೊಂದಿಗೆ ಶಾಮ್‌ ದಿವಾನ್‌, ಮೋಹನ್‌ ಕಾತರಿಕಿಯವರೂ ಇರುತ್ತಾರೆ ಎಂದು ಹೇಳಿದರು.

ಇದೇ ವೇಳೆ, ಕೇಂದ್ರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿರುವ ಶಾಂತಾರಾಮ್‌ ನಾಡಕರ್ಣಿ ಅವರಿಗೆ ಗೋವಾ ರಾಜ್ಯದ ಪರವಾಗಿ ವಾದ ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಬಾರದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಧಾನಿ ಮಧ್ಯಸ್ಥಿಕೆಗೆ ಬಿಜೆಪಿ ವಿರೋಧ: ಮಹದಾಯಿ ವಿವಾದವನ್ನು ನ್ಯಾಯ ಮಂಡಳಿಯ ಹೊರಗೆ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಲು ಪ್ರಧಾನಿ ಮಧ್ಯಸ್ಥಿಕೆಗೆ ಮನವಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಾಗ ಬಿಜೆಪಿ ನಾಯಕರು ಸಭೆಯಿಂದ ಹೊರ ನಡೆಯುವುದಾಗಿ ಎಚ್ಚರಿಸಿದರು ಎನ್ನಲಾಗಿದೆ. ಪ್ರಧಾನಿ ಬಗ್ಗೆ ಮಾತನಾಡುವುದಾದರೆ, ನಾವು ಬರುವುದಿಲ್ಲ ಎಂದು ಪ್ರತಿಪಕ್ಷದ ನಾಯಕರಾದ ಜಗದೀಶ್‌ ಶೆಟ್ಟರ್‌ ಹಾಗೂ ಕೆ.ಎಸ್‌. ಈಶ್ವರಪ್ಪ ಹೇಳಿದರು ಎಂದು ತಿಳಿದು ಬಂದಿದೆ.

ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗುವ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ವ ಪಕ್ಷ ನಿಯೋಗ ಕರೆದುಕೊಂಡು ಹೋಗಲು ಸಮಯ ನೀಡುವಂತೆ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಅವರು ಸಮಯ ನೀಡಿದರೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.