ಭ್ರಷ್ಟತೆ ಮರೆತಿರಾ?: ರಾಹುಲ್‌ ಲೇವಡಿ

Team Udayavani, Feb 11, 2018, 6:00 AM IST

180210kpn78.jpg

ಹೊಸಪೇಟೆ: ಪ್ರಧಾನಿ ಮೋದಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡು ತ್ತಾರೆ. ಆದರೆ, ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ವಿಶ್ವದಾಖಲೆ ಮಾಡಿದ್ದನ್ನು ಅವರು ಮರೆತಂತಿದೆ ಎಂದು ರಾಹುಲ್‌ ಗಾಂಧಿ ಲೇವಡಿ  ಮಾಡಿದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಭೂಮಿ, ಗಣಿ,ರೇಪ್‌ ಇನ್ನಿತರ ಹಗರಣಗಳಲ್ಲಿ ಸಿಲುಕಿತ್ತು. ಸಿದ್ದರಾಮಯ್ಯ ನೇತೃತ್ವದ ಸರಕಾರ ಯಾವುದಾದರೂ ಹಗರಣದಲ್ಲಿ ಸಿಲುಕಿದೆಯೇ ಹೇಳಿ ಎಂದು ಪ್ರಧಾನಿಯವರನ್ನು ಪ್ರಶ್ನಿಸಿದರು.

ಯಡಿಯೂರಪ್ಪ ಅವರನ್ನು ಹೊರ ಹಾಕಿದ್ದ ಬಿಜೆಪಿಯೇ ಇದೀಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ ಎಂದು ವ್ಯಂಗ್ಯವಾಡಿದರು.
ರಾಫೆಲ್‌ ಯುದ್ಧ ವಿಮಾನ ತಯಾರಿಸುವ ಗುತ್ತಿಗೆಯನ್ನು ಬೆಂಗಳೂರಿನ ಎಚ್‌ಎಎಲ್‌ಗೆ ನೀಡಲಾಗಿತ್ತು. ಆದರೆ,ಮೋದಿ ಯವರು ಏಕಾಏಕಿ ಫ್ರಾನ್ಸ್‌ನ ಕಂಪನಿಯೊಂದಕ್ಕೆ ಗುತ್ತಿಗೆ ನೀಡಿ ದ್ದರ ಹಿಂದಿನ ರಹಸ್ಯವೇನು ಎಂದು ಪ್ರಶ್ನಿಸಿದರು.

ಎಚ್‌ಎಎಲ್‌ಗೆ ನೀಡಿದ್ದರೆ ನಮ್ಮ ಯುವಕರಿಗೆ ಅವಕಾಶ ಸಿಗುತ್ತಿತ್ತು. ಫ್ರಾನ್ಸ್‌ ದೇಶದ ಸ್ನೇಹಕ್ಕಾಗಿ ಮೋದಿ ಎಚ್‌ಎಎಲ್‌ ಗುತ್ತಿಗೆ ರದ್ದುಪಡಿಸಿದರು. ಈ ನಿರ್ಧಾರ ಪೂರ್ವದಲ್ಲಿ ರಕ್ಷಣಾ ಸಚಿವರು, ಸಂಪುಟದ ಒಪ್ಪಿಗೆ ಪಡೆಯಲಾಗಿತ್ತೆ ಎಂಬುದನ್ನು ಮೋದಿ ದೇಶದ ಜನತೆ ಮುಂದೆ ಸ್ಪಷ್ಟಪಡಿಸಬೇಕು ಎಂದು ರಾಹುಲ್‌ ಒತ್ತಾಯಿಸಿದರು.

ಕರ್ನಾಟಕದ ಅಭಿವೃದ್ಧಿ ಕೇವಲ ಒಬ್ಬ ವ್ಯಕ್ತಿಯಿಂದ ಆಗಿದೆ ಎಂದು ನಾವು ಖಂಡಿತವಾಗಿಯೂ ಹೇಳುವುದಿಲ್ಲ. ಬಿಜೆಪಿಗೂ ನಮಗೂ ಇರುವ ವ್ಯತ್ಯಾಸ ಇದು. ರಾಜ್ಯದ ಎಲ್ಲ ವರ್ಗಗಳ ಜನರ ಶಕ್ತಿಯಿಂದ ಸಿದ್ಧರಾಮಯ್ಯ ಅದನ್ನು ಮಾಡಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ನೀಡಿದ ಭರವಸೆಯನ್ನು ಈಡೇರಿಸುತ್ತದೆ. ಹೈದರಾಬಾದ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 371(ಜೆ)ಕಲಂ ಜಾರಿಗೆ ಭರವಸೆ ನೀಡಿದಂತೆ ಸೌಲಭ್ಯ ನೀಡಿದ್ದೇವೆ. ಈ ಸೌಲಭ್ಯ ನೀಡಲು ಆಗ ಉಪಪ್ರಧಾನಿಯಾಗಿದ್ದ ಎಲ್‌.ಕೆ.ಆಡ್ವಾಣಿ ನಿರಾಕರಿಸಿದ್ದರು ಎಂದರು.

371(ಜೆ )ಕಲಂನಿಂದಾಗಿ ಹೈ-ಕ ಭಾಗ ಅಭಿವೃದ್ಧಿಗೆ ಹಿಂದಿನ 350 ಕೋಟಿ ರೂ. ಬದಲು ಈಗ ನಾಲ್ಕು ಸಾವಿರ ಕೋಟಿ ರೂ.ಅನುದಾನ ಬರುತ್ತಿದೆ. ಇಂಜಿನಿಯರಿಂಗ್‌, ವೈದ್ಯಕೀಯ ಶಿಕ್ಷಣದಲ್ಲಿ ಹೈ-ಕದ ಸುಮಾರು ಐದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರವೇಶ ಹಾಗೂ ಅಂದಾಜು 20 ಸಾವಿ ರಕ್ಕೂ ಅಧಿಕ ಯುವಕರಿಗೆ ಉದ್ಯೋಗ ಲಭ್ಯವಾಗಿದೆ ಎಂದರು.

ಬಳ್ಳಾರಿ ಜಿಲ್ಲೆ ತಾಯಿ ಸೋನಿಯಾ ಹಾಗೂ ನಮ್ಮ ಕುಟುಂಬ ಕ್ಕೆ ಮರೆಯಲಾಗದ ರೀತಿಯಲ್ಲಿ ಹತ್ತಿರವಾಗಿದೆ. ಯಾವಾಗ ಕರೆದರೂ ಬಂದು ಇಲ್ಲಿ ನಿಮ್ಮೊಂದಿಗಿರುವೆ ಎಂದು ರಾಹುಲ್‌ ಭರವಸೆ ನೀಡಿದರು.

ಗಮನ ಸೆಳೆದ ಅನಿಲ್‌ ಲಾಡ್‌
ಪಕ್ಷ ದೊಂದಿಗೆ ಮುನಿಸಿಕೊಂಡಂತಿದ್ದ ಬಳ್ಳಾರಿ ನಗರ ಕ್ಷೇತ್ರದ ಶಾಸಕ ಅನಿಲ್‌ ಲಾಡ್‌ ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಾರೆಂಬ ಸುದ್ದಿ ಹಬ್ಬಿತ್ತಾದರೂ, ಹೊಸ ಪೇಟೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ವೇದಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.
 
ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.