ಆರ್ಟಿಇ ತಂತ್ರಾಂಶ ದೋಷ ಎದುರಾದರೆ ದೂರು ಸಲ್ಲಿಸಿ
Team Udayavani, Mar 3, 2018, 6:45 AM IST
ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಯಲ್ಲಿ ಲಭ್ಯವಿರುವ ಸೀಟುಗಳಿಗೆ ಅರ್ಜಿ ಸಲ್ಲಿಸುವ ತಂತ್ರಾಂಶದಲ್ಲಿ ಯಾವುದೇ ದೋಷ ಕಂಡುಬಂದಲ್ಲಿ ಆನ್ಲೈನ್ ಮೂಲಕ ದೂರು ಸಲ್ಲಿಸಬಹುದಾದ ವ್ಯವಸ್ಥೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಜಾರಿ ಮಾಡಿದೆ. ಅರ್ಜಿ ಸಲ್ಲಿಸುವ ವೇಳೆ ತಂತ್ರಾಂಶದಲ್ಲಿ ತೊಡಕುಂಟಾದಲ್ಲಿ (ಹೋಂ ಪೇಜ್)ಆರ್ಟಿಇ-2018 ಪೋರ್ಟಲ್ನಲ್ಲಿ ದೂರು ನೋಂದಾವಣೆ ಲಿಂಕ್ ಕ್ಲಿಕ್ ಮಾಡಿ ದೂರನ್ನು ಸಲ್ಲಿಸಬಹುದಾಗಿದೆ.
ಮಾ.21ರ ವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಮಾ.1ರ ಅಂತ್ಯಕ್ಕೆ 7427 ಅರ್ಜಿ ಸಲ್ಲಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಅಗತ್ಯ ದಾಖಲೆ ಸಮೇತ ಬಿಇಒ ಕಚೇರಿ ಅಥವಾ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು-1,ಕರ್ನಾಟಕ-1, ಎಜೆಎಸ್ಕೆ ಕೇಂದ್ರಗಳಲ್ಲಿ 15 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ