ಕೇಂದ್ರ ಸಚಿವ ಹೆಗಡೆ, ಸಿ.ಟಿ. ರವಿಗೆ ನೋಟಿಸ್
Team Udayavani, Mar 9, 2018, 6:35 AM IST
ಬೆಂಗಳೂರು: ಟಿಪ್ಪು ಸುಲ್ತಾನ್ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ವಿಚಾರದ ಸಲುವಾಗಿ ದಾಖಲಾಗಿರುವ ಕ್ರಿಮಿನಲ್ ಅರ್ಜಿ ಸಂಬಂಧ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ ರವಿ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಜನಪ್ರತಿನಿಧಿಗಳಾಗಿ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಹೇಳಿಕೆ ನೀಡಿದ್ದ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ ರವಿ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರು ವಜಾಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಎ. ಆಲಂ ಪಾಷಾ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ ರವಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಮೂರ್ತಿ ಡಿ. ನಾಯಕ್ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ