ಹಿಂದೂ ಧರ್ಮಕ್ಕಿಂತ ಲಿಂಗಾಯತ ಸಂಪೂರ್ಣಭಿನ್ನ: ಆಕ್ಷೇಪಣೆ ಸಲ್ಲಿಕೆ
Team Udayavani, Mar 16, 2018, 10:45 AM IST
ಬೆಂಗಳೂರು: ಇಷ್ಟಲಿಂಗ ಪೂಜಿಸುವ ಪ್ರತಿಪಾದಿಸುವ ಏಕೈಕ ಧರ್ಮ ಲಿಂಗಾಯತವಾಗಿದ್ದು, ಹಿಂದೂ ಧರ್ಮಕ್ಕಿಂತ ಸಂಪೂರ್ಣ ಭಿನ್ನವಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾಕ ಇಲಾಖೆ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ಶಿಫಾರಸಿಗೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ ನಾಲ್ಕು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಗುರುವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ|ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ಪೀಠಕ್ಕೆ, ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ಈ ಅಂಶಗಳನ್ನು ಉಲ್ಲೇಖೀಸಿದೆ.
ಹಿಂದೂ ಧರ್ಮದಲ್ಲಿ ಮೂರ್ತಿ ಪೂಜೆ ಮಾಡಲಾಗುತ್ತದೆ. ಲಿಂಗಾಯತ ಧರ್ಮದಲ್ಲಿ ಇಷ್ಟಲಿಂಗವನ್ನು ಪೂಜಿಸಲಾಗುತ್ತದೆ. ಬಸವಣ್ಣ ವೇದ ಹಾಗೂ ಆಗಮ ಶಾಸ್ತ್ರದಿಂದ ದೂರ ಉಳಿದುಕೊಂಡಿದ್ದರು. ಲಿಂಗಾಯತ ಧರ್ಮದ ವಿಚಾರಗಳು ಸಂಪೂರ್ಣ ಭಿನ್ನವಾಗಿವೆ. ಯಾವುದೇ ಜಾತಿ ಬೇಧ ಮಾಡುವುದಿಲ್ಲ. ವಿಧವಾ ಪುನರ್ವಿವಾಹಕ್ಕೆ ಹಿಂದೂ ಧರ್ಮದಲ್ಲಿ ಅವಕಾಶವಿಲ್ಲ. ಈ ಎಲ್ಲ ಅಂಶಗಳನ್ನು ಉಲ್ಲೇಖೀಸಿದ್ದು ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆ ನೀಡಬಹುದು ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಅಕ್ರಂ ಪಾಷಾ ಆಕ್ಷೇಪಣೆ ಸಲ್ಲಿಸಿದರು. ಇದಕ್ಕೆ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಪ್ರಕರಣದ ವಿಚಾರಣೆಯನ್ನು ನ್ಯಾಯಪೀಠ ಎ.3ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ