ಸುದ್ದಿಗೋಷ್ಠಿಯಲ್ಲೇ ವಿಷ ಕುಡಿದ ರೌಡಿಶೀಟರ್ ನಾಗ!
Team Udayavani, Apr 6, 2018, 2:27 PM IST
ಬೆಂಗಳೂರು: ರೌಡಿ ಶೀಟರ್ ನಾಗ ಸುದ್ದಿಗೋಷ್ಠಿಯಲ್ಲೇ ವಿಷ ಸೇವನೆ ಮಾಡಿದ ಘಟನೆ ಗುರುವಾರ ನಗರದ ಪ್ರಸ್ ಕ್ಲಬ್ನಲ್ಲಿ ನಡೆದಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರನ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ರೌಡಿಶೀಟರ್ ಬಾಂಬ್ ನಾಗ ಮತ್ತು ಇಬ್ಬರು ಮಕ್ಕಳಾದ ಗಾಂಧಿ ಮತ್ತು ಶಾಸ್ತ್ರಿ ಯನ್ನು ಶ್ರೀರಾಮಪುರ ಠಾಣೆ ಪೊಲೀಸರು ವಾರದ ಹಿಂದೆ ಬಂಧಿಸಿದ್ದರು.
ಸುದ್ದಿಗೋಷ್ಠಿಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್ ಮತ್ತು ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಅವರು ನನಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ವಿಷ ಸೇವನೆ ಮಾಡಿದ್ದಾನೆ. ಕೂಡಲೆ ನಾಗನನ್ನು ನೃಪತುಂಗ ರಸ್ತೆಯಲ್ಲಿರುವ ಸೈಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಾಗ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಿದ್ಧತೆ ನಡೆಸಿದ್ದ ಎಂದು ಹೇಳಲಾಗಿದೆ.
ಭಾರೀ ಪ್ರಮಾಣದಲ್ಲಿ ಹಳೇ ನೋಟುಗಳನ್ನು ಸಂಗ್ರಹಿಸಿಟ್ಟುಕೊಂಡ ಪ್ರಕರಣದಲ್ಲಿ ಕಳೆದ ವರ್ಷ ನಾಗ ಮತ್ತುಪುತ್ರರನ್ನು ವಶಕ್ಕೆ ಪಡೆಯಲಾಗಿತ್ತು. ನಾಗ ತಲೆ ಮರೆಸಿಕೊಂಡು ಪೊಲೀಸರ ನಿದ್ದೆ ಗೆಡಿಸಿ ಭಾರೀ ಸುದ್ದಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?