CONNECT WITH US  
echo "sudina logo";

ಬಿಜೆಪಿಗೆ ಗುಡ್ ಬೈ: ಜೆಡಿಎಸ್‍ಗೆ ಸೇರಿದ ಮಾಜಿ ಶಾಸಕ ಹೇಮಚಂದ್ರ ಸಾಗರ್

ಬೆಂಗಳೂರು: ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಪಕ್ಷ ತೊರೆದಿದ್ದ ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಹೇಮಚಂದ್ರ ಸಾಗರ್ ಅವರು ಇಂದು ಜೆಡಿಎಸ್‍ಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಅವರ ಸಮ್ಮುಖದಲ್ಲಿ ಹೇಮಚಂದ್ರ ಸಾಗರ್ ಅವರು ಜೆಡಿಎಸ್ ಸೇರಿದ್ದಾರೆ.

ಚಿಕ್ಕಪೇಟೆ ಕ್ಷೇತ್ರದಿಂದ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ 2018ರ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಹೇಮಚಂದ್ರ ಸಾಗರ್ ಅವರು ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕರಾಗಿದ್ದು, 2013ರ ಚುನಾವಣೆಯಲ್ಲಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ 2018ರ ಚುನಾವಣೆಗೆ ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು.

ಆದರೆ ಕೊನೆ ಗಳಿಗೆಯಲ್ಲಿ ಬಿಜೆಪಿ ಉದಯ್ ಗರುಡಾಚಾರ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರಿಂದ, ಹೇಮಚಂದ್ರ ಸಾಗರ್ ಅವರು ಬೇಸರಗೊಂಡು ಕಳೆದ ವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಗುಡ್ ಬೈ ಹೇಳಿದ್ದರು. 

Trending videos

Back to Top