CONNECT WITH US  

ಚಿಕ್ಕಮಗಳೂರು: ಡಾ. ಬಿ ಎಲ್‌ ಶಂಕರ್‌ಗೆ ಟಿಕೆ‌ಟ್‌; ಭಿನ್ನಮತ ಭುಗಿಲು

ಚಿಕ್ಕಮಗಳೂರು:  ಟಿಕೆಟ್‌ ಸಿಗದ ಕಾರಣಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿ ರಾಜ್ಯದ ವಿವಿಧೆಡೆ ಸ್ಫೋಟಗೊಳ್ಳುತ್ತಿರುವ ಭಿನ್ನಮತ ಚಿಕ್ಕಮಗಳೂರಿನಲ್ಲಿ  ಪರಾಕಾಷ್ಠೆಯನ್ನು ತಲುಪಿದೆ. 

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಗಾಯತ್ರಿ ಶಾಂತೇಗೌಡ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್‌ ಕೈತಪ್ಪಿರುವುದರಿಂದ ಅವರ ಬೆಂಬಲಿಗ ಕಾಂಗ್ರೆಸ್‌ ಕಾರ್ಯಕರ್ತರು ತೀವ್ರ ಆಕೋಶಿತರಾಗಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರಕ್ಕೆ ಡಾ. ಬಿ ಎಲ್‌ ಶಂಕರ್‌ಗೆ ಕಾಂಗ್ರೆಸ್‌ ಟಿಕೆಟ್‌ ಲಭಿಸಿದೆ. ಇದನ್ನು ವಿರೋಧಿಸಿ ಗಾಯತ್ರಿ ಶಾಂತೇಗೌಡ ಅವರ ಬೆಂಬಲಿಗರು ಕಾಂಗ್ರೆಸ್‌ ಚಿಕ್ಕಮಗಳೂರು ಜಿಲ್ಲಾ ಕಾರ್ಯಾಲಯಕ್ಕೆ ನುಗ್ಗಿ ಧಾಂಧಲೆ ನಡೆಸಿದ್ದಾರೆ. 

ಹಲವು ನೂರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಕಾರ್ಯಾಲಯದಲ್ಲಿನ ಕುರ್ಚಿಗಳನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್‌ ಜಿಲ್ಲಾಧ್ಯಕ್ಷರಿಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಿದ್ದಾರೆ. 

Trending videos

Back to Top