CONNECT WITH US  

ಚುನಾವಣೆಗಾಗಿ “ಕೈ” ಗುತ್ತಿಗೆದಾರರಿಂದ ಹಣ ಸಂಗ್ರಹಿಸಿದೆ…ಅವರ ಗತಿ ಏನು?

ಮೈಸೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗುತ್ತಿಗೆದಾರರಿಂದ ಮುಂಗಡವಾಗಿ ಹಣ ಸಂಗ್ರಹಿಸಿದೆ. ಇವರು ಸೋತರೆ ಆ ಗುತ್ತಿಗೆದಾರರ ಗತಿ ಏನು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಅವರು, ಚುನಾವಣೆಗಾಗಿ ಗುತ್ತಿಗೆದಾರರಿಗೆ ಏನೇನೋ ಭರವಸೆ ಕೊಟ್ಟು ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಹಗರಣಗಳ ಬಗ್ಗೆ ಹೇಳಿದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕ್ಷಿ ಕೊಡಿ ಎಂದು ಹೇಳುತ್ತಾರೆ. ಈಗ ಬಾದಾಮಿಯಲ್ಲಿ ಸ್ಪರ್ಧೆ ಮಾಡಲು ಹೊರಟಿದ್ದಾರೆ. ಸಿಎಂ ಬಾದಾಮಿ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷ ಮತ್ತೂ 25 ಸ್ಥಾನ ಕಡಿಮೆ ಗಳಿಸಲಿದೆ ಎಂದು ಭವಿಷ್ಯ ನುಡಿದರು.

ಸಿಎಂ ಸರ್ಕಾರ ಹಾಗೂ ಭ್ರಷ್ಟರನ್ನು ರಕ್ಷಣೆ ಮಾಡುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಇಬ್ಬರೂ ನಮಗೆ ಶತ್ರುಗಳೇ ಎಂದು ಈ ಸಂದರ್ಭದಲ್ಲಿ ಹೇಳಿದರು

Trending videos

Back to Top