ಕರ್ನಾಟಕದವರಿಗೆ ಎನ್ವೈಸಿ ಅಧ್ಯಕ್ಷ ಸ್ಥಾನ?
Team Udayavani, Apr 25, 2018, 6:00 AM IST
ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕರ್ನಾಟಕದವರಿಗೆ ಒಲಿಯುವ ಸಾಧ್ಯತೆ ಇದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅರವಿಂದರ್ ರಾಜಾ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯುವ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಷ್ಟ್ರಾದ್ಯಂತ ಪಕ್ಷದ ನಿಷ್ಠಾವಂತ 40 ಯುವಕರ ಸಂದರ್ಶನ ನಡೆಸಿದ್ದು, ಅವರಲ್ಲಿ ಕರ್ನಾಟಕದ ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ. ಶ್ರೀನಿವಾಸ್
ಆಯ್ಕೆಯಾಗಿದ್ದರು.
ಆದರೆ, ಅಂತಿಮವಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ರಿಜ್ವಾನ್ ಅವರನ್ನು ಕೈ ಬಿಡಲಾಗಿದೆ. ಬಿ.ವಿ. ಶ್ರೀನಿವಾಸ್ ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದಾರೆ. ಜತೆಗೆ ರಾಜಸ್ಥಾನ ಯುವ ಘಟಕದ ಅಧ್ಯಕ್ಷ ಅಶೋಕ್ ಚಾಂದನಾ, ತೆಲಂಗಾಣದ ಶಾಸಕ ವಂಶಿ ರೆಡ್ಡಿ, ಉತ್ತರ ಪ್ರದೇಶ ಯುವ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಹರ್ಷವರ್ಧನ್ ಹಾಗೂ ಮಹಾರಾಷ್ಟ್ರ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ವಿಶ್ವಜಿತ್ ಕದಂ ಪೈಪೋಟಿ ನಡೆಸಿದ್ದಾರೆ. ಇನ್ನೆರಡು ದಿನದಲ್ಲಿ ರಾಹುಲ್ ಗಾಂಧಿ ಯುವ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರ ಆಯ್ಕೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ