ಹಾಸನ ಜಿಲ್ಲಾಧಿಕಾರಿಯಾಗಿ ಡಾ| ಪಿ.ಸಿ.ಜಾಫರ್ ನೇಮಕ
Team Udayavani, Apr 25, 2018, 6:00 AM IST
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಮತ್ತೆ ವರ್ಗಾವಣೆಯಾಗಿದ್ದಾರೆ. ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕ ಜಿಲ್ಲಾಧಿಕಾರಿಯಾಗಿದ್ದ ಡಿ.ರಂದೀಪ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಬದಲಾ ಯಿಸಿರುವ ರಾಜ್ಯ ಸರಕಾರ ಇದೀಗ
ಡಾ| ಪಿ.ಸಿ.ಜಾಫರ್ ಅವರನ್ನು ನೇಮಿಸಿದೆ. ಇದರೊಂದಿಗೆ ಹಾಸನ ಜಿಲ್ಲಾಧಿಕಾರಿ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದ್ದು, ತಮ್ಮ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿ ಸಿದಂತೆ ಹೈಕೋರ್ಟ್ ನೀಡುವ ಆದೇಶದ ಮೇಲೆ ಮುಂದಿನ ಬೆಳವಣಿಗೆಗಳು ನಡೆಯಲಿವೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಜ. 22ರಂದು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿತ್ತು. ಆದರೆ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ವರ್ಗಾವಣೆ ಮಾಡಿದ್ದರಿಂದ ಚುನಾವಣಾ ಆಯೋಗ ಈ ವರ್ಗಾವಣೆ ತಡೆಹಿಡಿದಿತ್ತು. ಹೀಗಾಗಿ ಸರಕಾರ ವರ್ಗಾವಣೆ ಆದೇಶ ಹಿಂಪಡೆದಿತ್ತು. ಅನಂತರ ಮಾ. 8ರಂದು ಮತ್ತೆ ಅವರನ್ನು ವರ್ಗಾವಣೆಗೊಳಿಸಿ ಆ ಜಾಗಕ್ಕೆ ರಂದೀಪ್ ಅವರನ್ನು ನೇಮಿಸಲಾಗಿತ್ತು.
ರಂದೀಪ್ ವರ್ಗಾವಣೆ ಸಮರ್ಥನೆ
ಚುನಾವಣಾ ಕರ್ತವ್ಯಕ್ಕೆ ಚ್ಯುತಿ ಬರುವ ರೀತಿಯಲ್ಲಿ ನಡೆದುಕೊಂಡಿದ್ದರಿಂದ ಹಾಸನ ಜಿಲ್ಲಾಧಿಕಾರಿ ರಂದೀಪ್ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಹೇಳಿದ್ದಾರೆ. ಕೆಲವು ಆಡಳಿತಾತ್ಮಕ ಸೂಕ್ಷ್ಮ ವಿಚಾರಗಳನ್ನು ಬಹಿರಂಗವಾಗಿ ಹೇಳಿಕೊಂಡಿರುವ ಹಾಸನ ಜಿಲ್ಲಾಧಿಕಾರಿ ನಡವಳಿಕೆ ಸರಿಯಲ್ಲ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ