ಹಿರಿಯ ಶಾಸಕ ಉಮೇಶ್ ಕತ್ತಿ ಹಂಗಾಮಿ ಸ್ಪೀಕರ್ ಆಗಿ ಆಯ್ಕೆ?

ಬೆಂಗಳೂರು: ಶನಿವಾರ ಸಂಜೆ 4ಗಂಟೆಗೆ ವಿಶ್ವಾಸಮತ ಸಾಬೀತುಪಡಿಸಬೇಕೆಂಬ ಸುಪ್ರೀಂಕೋರ್ಟ್ ನ ಮಹತ್ವದ ತೀರ್ಪಿನ ಹಿನ್ನೆಲೆಯಲ್ಲಿ ಬಿಜೆಪಿ ಚುನಾಯಿತ ಜನಪ್ರತಿನಿಧಿಗಳ ಪೈಕಿ ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ ಅವರ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
8 ಬಾರಿ ಆಯ್ಕೆಯಾಗಿರುವ ಹಿರಿಯ ಶಾಸಕರ ಪೈಕಿ ಕಾಂಗ್ರೆಸ್ ಪಕ್ಷದ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆಗಳು ತುಂಬಾ ಕಡಿಮೆ ಎನ್ನಲಾಗಿದೆ.
ಹುಕ್ಕೇರಿ ವಿಧಾನಸಭಾ ಕ್ಷೇತ್ರದಿಂದ 7ನೇ ಬಾರಿ ಆಯ್ಕೆಯಾಗಿರುವ ಉಮೇಶ್ ಕತ್ತಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಲು ಸಿಎಂ ಬಿಎಸ್ ಯಡಿಯೂರಪ್ಪ ಒಲವು ತೋರಿದ್ದಾರೆ ಎಂದು ವರದಿ ಹೇಳಿದೆ.