CONNECT WITH US  

ಬೋಪಯ್ಯ ನೇಮಕ; ರಾಜ್ಯಪಾಲರ ಆಯ್ಕೆ ಸರಿಯಾಗಿದೆ; ಶೋಭಾ

ಬೆಂಗಳೂರು: ಬಿಜೆಪಿ ಶಾಸಕ ಕೆಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಆಯ್ಕೆ ಮಾಡಿರುವ ರಾಜ್ಯಪಾಲರ ಕ್ರಮವನ್ನು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿದ್ದರೆ, ಮತ್ತೊಂದೆಡೆ ರಾಜ್ಯಪಾಲರ ಆಯ್ಕೆ ಸರಿಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಕೆಜಿ ಬೋಪಯ್ಯ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದರು.

2009ರ ನಂತರ ಸ್ಪೀಕರ್ ಆಗಿ 2013ರವರೆಗೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಹೀಗಾಗಿ ಸ್ಪೀಕರ್ ಆಗಿ ಕೆಲಸ ಮಾಡಿದ ಅನುಭವ ಕೆಜಿ ಬೋಪಯ್ಯನವರಿಗೆ ಇದೆ. ಆದರೆ ಕಾಂಗ್ರೆಸ್ ಅನವಶ್ಯಕವಾಗಿ ಆರೋಪಿಸುತ್ತಿದೆ ಎಂದರು.

ನಾಳೆ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಕೆಜಿ ಬೋಪಯ್ಯನವರೇ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.


Trending videos

Back to Top