CONNECT WITH US  

ಸೋಮವಾರ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ?

ಬೆಂಗಳೂರು: ವಿಶ್ವಾಸಮತ ಯಾಚನೆಗೂ ಮುನ್ನ ಬಿಎಸ್ ಯಡಿಯೂರಪ್ಪ ಶನಿವಾರ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಮಧ್ಯಾಹ್ನ ಅಥವಾ ಸಂಜೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.

ವಿಧಾನಸೌಧ ಅಥವಾ ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಮೈದಾನದ ಬಳಿ ಪ್ರಮಾಣವಚನ ಸ್ವೀಕಾರ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೆಡಿಎಸ್ ನಾಯಕರಿಗೆ ಮಾಯಾವತಿ ಅಭಿನಂದನೆ:

ಪ್ರಜಾಪ್ರಭುತ್ವವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ರಾಜ್ಯಪಾಲರ ಮೇಲೆ ಒತ್ತಡ ಹೇರಿ ಬಿಜೆಪಿ ಅಧಿಕಾರಕ್ಕೆ ಏರಲು ಯತ್ನಿಸಿ ವಿಫಲವಾಗಿದೆ. ಆದರೆ ಜೆಡಿಎಸ್ ಕಾನೂನು ಸಮರದಲ್ಲಿ ಗೆಲ್ಲುವ ಮೂಲಕ ಜಯ ಸಾಧಿಸಿದೆ ಎಂದು ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಹೆಸರನ್ನು ಮಾಯಾವತಿ ಪ್ರಸ್ತಾಪಿಸಿಲ್ಲ.

Trending videos

Back to Top