ವಿಧಾನಸಭಾಧ್ಯಕ್ಷರ ಹುದ್ದೆಗಿಂದು ಚುನಾವಣೆ


Team Udayavani, May 25, 2018, 6:40 AM IST

24bnp-11.jpg

ಬೆಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್‌ ಸ್ಥಾನಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಒಮ್ಮತದ ಅಭ್ಯರ್ಥಿಯಾಗಿ ಶ್ರೀನಿವಾಸಪುರ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಸಹ ಹಿರಿಯ ಶಾಸಕ ಎಸ್‌. ಸುರೇಶ್‌ ಕುಮಾರ್‌ ಅವರನ್ನು ಕಣಕ್ಕಿಳಿಸಿದೆ.

ಗುರುವಾರ ಕೆ.ಆರ್‌.ರಮೇಶ್‌ಕುಮಾರ್‌ ಹಾಗೂ ಎಸ್‌. ಸುರೇಶ್‌ಕುಮಾರ್‌ ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರಿಗೆ ಸ್ಪೀಕರ್‌ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಶುಕ್ರವಾರ ಹಂಗಾಮಿ ಸ್ಪೀಕರ್‌ ಕೆ.ಜೆ.ಬೋಪಯ್ಯ ಚುನಾವಣೆ
ನಡೆಸಲಿದ್ದಾರೆ.

ರಮೇಶ್‌ ಕುಮಾರ್‌ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಸೂಚಕರಾಗಿ ಸಹಿ ಹಾಕಿದ್ದರೆ,ಸುರೇಶ್‌ಕುಮಾರ್‌ ಅವರಿಗೆ ಸುನಿಲ್‌ಕುಮಾರ್‌ ಡಾ.ಸಿ.ಎನ್‌.ಅಶ್ವಥ್‌ನಾರಾಯಣ ಸೂಚಕರಾಗಿ ಸಹಿ ಹಾಕಿದ್ದಾರೆ.

15 ವಿಧಾನಸಭೆಯ ಮುಂದುವರಿದ ಅಧಿವೇಶನ ಶುಕ್ರವಾರ ಮಧ್ಯಾಹ್ನ 12.15 ಕ್ಕೆ ಆರಂಭವಾಗಲಿದ್ದು, ಹಂಗಾಮಿ ಸ್ಪೀಕರ್‌ ಕೆ.ಜಿ.ಬೊಪಯ್ಯ ಸಭಾಧ್ಯಕ್ಷರ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

ಪ್ರಕ್ರಿಯೆ ಹೇಗೆ?: ಬಿಜೆಪಿ ಸದಸ್ಯ ಸುರೇಶ್‌ ಕುಮಾರ್‌ ಮೊದಲು ನಾಮಪತ್ರ ರೂಪದ ಪ್ರಸ್ತಾವನೆ ಸಲ್ಲಿಸಿರುವುದರಿಂದ ಸಂಖ್ಯಾಬಲ ಸಾಬೀತು ಪಡಿಸಲು ಮೊದಲ ಅವಕಾಶವಿದೆ.

ಒಂದು ವೇಳೆ ಬಿಜೆಪಿಗೆ ಬಹುಮತ ಬಂದರೆ ಸುರೇಶ್‌ ಕುಮಾರ್‌ ಸಭಾಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ಸಂಖ್ಯಾಬಲ ಸಿಗದಿದ್ದರೆ ಕಾಂಗ್ರೆಸ್‌ನ ರಮೇಶ್‌ ಕುಮಾರ್‌ ಅವರಿಗೆ ಸಂಖ್ಯಾಬಲ ಸಾಬೀತಿಗೆ ಅವಕಾಶ ಸಿಗಲಿದೆ.

ಆಯ್ಕೆ ಪ್ರಕ್ರಿಯೆ: ಮೂರು ವಿಧದಲ್ಲಿ ಆಯ್ಕೆಗೆ ಅವಕಾಶ
– ಧ್ವನಿಮತದ ಮೂಲಕ ಆಯ್ಕೆ
– ಸದಸ್ಯರು ಕೈ ಎತ್ತುವ ಮೂಲಕ ಬೆಂಬಲ
– ಸದಸ್ಯರ ತಲೆ ಎಣಿಕೆ ಮಾಡುವ ಮೂಲಕ
ಸಂಖ್ಯಾ ಬಲ ಖಾತ್ರಿ ಚುನಾವಣೆ ಪ್ರಕ್ರಿಯೆ ಆರಂಭವಾದ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ಸದಸ್ಯರಿಗೆ ಮಾತ್ರ ಬೆಂಬಲ ಸೂಚಿಸಲು ಅವಕಾಶ ಇರುತ್ತದೆ. ಮೂರು ರಾಜಕೀಯ ಪಕ್ಷಗಳು ತಮ್ಮ ಸದಸ್ಯರಿಗೆ ವಿಪ್‌
ಜಾರಿಗೊಳಿಸಲು ಅವಕಾಶವಿದೆ. ಒಂದು ವೇಳೆ ಶಾಸಕರು ಪಕ್ಷದ ವಿಪ್‌ ಉಲ್ಲಂಘನೆ ಮಾಡಿದರೆ, ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಅನರ್ಹಗೊಳಿಸಲು ಅವಕಾಶ ಇರುತ್ತದೆ.

ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾತನಾಡಿದ ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ, ಎಲ್ಲ ಶಾಸಕರಿಗೂ ಈಗಾಗಲೇ ಸಭಾಧ್ಯಕ್ಷರ ಚುನಾವಣೆ ಬಗ್ಗೆ ಮಾಹಿತಿ ನೀಡಲಾಗಿದೆ. ಮೂರು ರಾಜಕೀಯ ಪಕ್ಷಗಳ
ಶಾಸಕಾಂಗ ಕಚೇರಿಗಳಿಗೂ ಮಾಹಿತಿ ನೀಡಲಾಗಿದ್ದು, ಸಭಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಸೂಚಿಸಲಾಗಿದೆ ಎಂದರು.

ಸಭಾಧ್ಯಕ್ಷರ ಚುನಾವಣೆ ನಂತರ ವಿಧಾನಸಭೆ ಕಾರ್ಯದರ್ಶಿಯಿಂದ ವಿಧಾನಸಭೆಯ ಹಿಂದಿನ ಅಧಿವೇಶನದ ವರದಿ ಮಂಡನೆಯಾಗುತ್ತದೆ. ಆ ನಂತರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಹುಮತ ಸಾಬೀತು ಪಡಿಸಲು ಸದನದಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ ಎಂದು ಮೂರ್ತಿ ತಿಳಿಸಿದ್ದಾರೆ.

ರಮೇಶ್‌ ಕುಮಾರ್‌ ಗೆಲುವು ಖಚಿತ. ಹಿಂದೆ ಸಭಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಇದೆ. ಅವರಿಗೆ ಕಾನೂನು ಜ್ಞಾನ ಇರುವುದರಿಂದ ಐದು ವರ್ಷ ಚೆನ್ನಾಗಿ ನಡೆಸಿಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ.
– ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಪಕ್ಷದ ರಾಜಾಧ್ಯಕ್ಷರ ಸೂಚನೆ ಮೇರೆಗೆ ಸಭಾಧ್ಯಕ್ಷ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದೇನೆ. ನಮ್ಮ ಬಳಿ ಸಂಖ್ಯಾಬಲ ಇದೆ. ಶುಕ್ರವಾರ ಚುನಾವಣೆ ನಡೆಯಲಿದೆ. ಅಲ್ಲಿ ಏನಾಗುತ್ತದೆಯೋ ಕಾದು ನೋಡೋಣ.
– ಸುರೇಶ್‌ ಕುಮಾರ್‌, ಬಿಜೆಪಿ ಸಭಾಧ್ಯಕ್ಷ ಸ್ಥಾನದ ಅಭ್ಯರ್ಥಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.