ಮತ್ತೆ ಲಿಂಗಾಯತ ಹೋರಾಟ:ಜಾಮದಾರ್‌


Team Udayavani, May 28, 2018, 7:15 AM IST

sm-jamdar-88.jpg

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಡಾ.ಎಸ್‌.ಎಂ.ಜಾಮದಾರ್‌ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಮಹಾಸಭೆಯ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸಿದ ನಂತರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸದಸ್ಯತ್ವ ಅಭಿಯಾನವನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗಾಗಿ ಮತ್ತೆ ಹೋರಾಟ ಆರಂಭಿಸುತ್ತಿಲ್ಲ. ಇನ್ನು ಮುಂದೆ ಬೃಹತ್‌ ಸಮಾವೇಶಗಳನ್ನು ಮಾಡುವ ಬದಲು ಸಂಘಟನೆ ಮಾಡುತ್ತೇವೆ. ಕೇಂದ್ರ ಸರ್ಕಾರವು ಸರ್ಕಾರ ರಾಜ್ಯ ಸರ್ಕಾರ ಕಳುಹಿಸಿಕೊಟ್ಟ ಪ್ರತ್ಯೇಕ ಧರ್ಮದ ಮಾನ್ಯತೆಯ ಪ್ರಸ್ತಾಪ ತಿರಸ್ಕರಿಸಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಗತ್ಯ ಬಿದ್ದರೆ ಕೇಂದ್ರ ಸರ್ಕಾರವನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭೆ ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ಹೀಗಾಗಿ ಮಹಾಸಭೆಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕೆಲವು ನಾಯಕರ ಸೋಲಿಗೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕಾರಣವಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ನಾವು ಹಿಂದೂ ಧರ್ಮ ಒಡೆದಿದ್ದೇವೆ ಎಂದು ಸುಳ್ಳು ಆರೋಪ ಮಾಡಿ ಚುನಾವಣೆಯಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಆದರೆ, ಲಿಂಗಾಯತ ಧರ್ಮ 900 ವರ್ಷಗಳಿಂದಲೂ ಸ್ವತಂತ್ರವಾಗಿದ್ದು, ಹಿಂದೂ ಧರ್ಮದ ಭಾಗವೇ ಆಗಿರಲಿಲ್ಲ. ಹೀಗಾಗಿ ಧರ್ಮ ಒಡೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಬಸವ ತ್ವತ್ವಗಳನ್ನು ಒಪ್ಪಿಕೊಂಡು ಕೆಲವು ವೈದಿಕ ಬ್ರಾಹ್ಮಣರು ಲಿಂಗಾಯತ ಧರ್ಮ ಸೇರಿದ್ದರು. ಅವರು ಕ್ರಮೇಣ ವೈದಿಕ ಆಚರಣೆಗಳನ್ನು ಮುಂದುವರಿಸಿದ್ದರಿಂದ  ಲಿಂಗಾಯತ ಧರ್ಮದಲ್ಲಿ ವೈದಿಕ ಆಚರಣೆ ಆರಂಭವಾಯಿತು. ವೀರಶೈವರೂ ಲಿಂಗಾಯತ ಧರ್ಮದ ಭಾಗವಾಗಿರುವುದರಿಂದ ಅವರನ್ನು ಧರ್ಮದಿಂದ ಹೊರಗಿಡುವ ಪ್ರಶ್ನೆಯೇ ಬರುವುದಿಲ್ಲ. ಆದರೂ ಕೆಲವು ಪಂಚಪೀಠಾಧೀಶರು ಅಪಪ್ರಚಾರ ಮಾಡುವ ಪ್ರಯತ್ನ ನಡೆಸಿದರು ಎಂದು ಬೇಸರ ವ್ಯಕ್ತಪಡಿಸಿದರು.

ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಜಿ.ಬಿ.ಪಾಟೀಲ್‌, ಡಾ.ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.