ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್; ಪಾಕ್ ಜಿಂದಾಬಾದ್ ಘೋಷಣೆ ಸೇರ್ಪಡೆ!
Team Udayavani, May 28, 2018, 4:37 PM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೆಬ್ ಸೈಟ್ ಅನ್ನು ಸೋಮವಾರ ಹ್ಯಾಕ್ ಮಾಡಲಾಗಿದ್ದು, ಅದರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಸೇರ್ಪಡೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ.
ವಿಶ್ವವಿದ್ಯಾಲಯದ ಐಟಿ ವಿಭಾಗ ಸರಿಪಡಿಸುವ ಕೆಲಸದಲ್ಲಿ ತೊಡಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಜೋಗನ್ ಶಂಕರ್ ತಿಳಿಸಿದ್ದಾರೆ ಎಂದು ಮಾಧ್ಯಮದ ವರದಿ ವಿವರಿಸಿದೆ.
www.kuvempu.ac.in ವೆಬ್ಸೈಟ್ನ್ನು ಹಂಟರ್ ಬಾಜ್ವಾ ಎಂಬ ದುಷ್ಕರ್ಮಿ ಹ್ಯಾಕ್ ಮಾಡಿದ್ದ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.