ಫೇಸ್ಬುಕ್ ಲೈವ್ ಇಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
Team Udayavani, May 29, 2018, 7:20 AM IST
ಜಗಳೂರು: ತನ್ನ ಚಿಕ್ಕಪ್ಪನ ಮಾನಸಿಕ ಕಿರುಕುಳ ತಾಳಲಾಗುತ್ತಿಲ್ಲ ಎಂದು ಆರೋಪಿಸಿದ ವಿವಾಹಿತ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು ವಿಷ ಸೇವಿಸುವ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಲೈವ್ ಆಗಿ ಹರಿಬಿಟ್ಟಿದ್ದಾನೆ.
ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದ ವಾಸಿ ನಾಗಭೂಷಣ (30) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸಿವಿಲ್ ಗುತ್ತಿಗೆದಾರನಾಗಿದ್ದ ಈತ ಸೋಮವಾರ ಮಧ್ಯಾಹ್ನ ವಿಷದ ಬಾಟಲಿ ಯೊಂದಿಗೆ ಪಟ್ಟಣದ ಕ್ರೀಡಾಂಗಣಕ್ಕೆ ತೆರಳಿದ್ದ. ಮೊಬೈಲ್ನಲ್ಲಿ ಫೇಸ್ಬುಕ್ ಆನ್ ಮಾಡಿಕೊಂಡು ಸ್ನೇಹಿತರಿಗೆ ವಿಷಯ ತಿಳಿಸಿದ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವಿಷ ಸೇವಿಸಿದ. ಇದನ್ನು ನೋಡುತ್ತಿದ್ದ ಸ್ನೇಹಿತರು ಕೂಡಲೇ ಸ್ಥಳಕ್ಕೆ ಆಗಮಿಸಿ, ನಾಗಭೂಷಣನನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈತ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾನೆ ಎನ್ನಲಾ
ಗುತ್ತಿದೆ. ಆದರೆ, ಈ ಕುರಿತು ಪೊಲೀಸ್ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ