ಫ‌ಲ ನೀಡಿತೇ ಸಿದ್ದು ಸಂಧಾನ?

Team Udayavani, Oct 26, 2018, 6:05 AM IST

sidda-kgaf-621x414livemint.jpg

ಮಂಡ್ಯ: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಡೆಸಿದ ರಾಜಕೀಯ ಸಂಧಾನ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಫ‌ಲ ಕೊಡುವುದೇ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಮಾಜಿ ಶಾಸಕರಾದ ಎನ್‌.ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಮತ್ತಿತರ ಮುಖಂಡರು ಅಧಿಕೃತವಾಗಿ ಚುನಾವಣಾ ರಣರಂಗವನ್ನೇ ಪ್ರವೇಶಿಸದೆ ತಟಸ್ಥ ನಿಲುವನ್ನು ತಾಳುವುದರ ಮೂಲಕ ಮೌನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬುಧವಾರದಂದು ಮಂಡ್ಯಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಜೆಡಿಎಸ್‌ನ ಪ್ರಬಲ ವಿರೋಧಿಗಳಾಗಿದ್ದ ನಾಯಕರನ್ನು ಮತ್ತು ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯಶಸ್ವಿಯಾದರು.

ಚುನಾವಣೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷದ ನಾಯಕರ ಭಾವಚಿತ್ರಗಳು ಆಯಾಯ ಕ್ಷೇತ್ರಗಳಲ್ಲಿ ವಿಜೃಂಭಿಸುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಪ್ರಚಾರ ವೇದಿಕೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಭವಿಷ್ಯದಲ್ಲಿ ಕಾರ್ಯಕರ್ತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂಬ ಭಯ ಪ್ರಮುಖ ಕಾರಣವಾಗಿದೆ. ಈ ಉದ್ದೇಶದಿಂದಲೇ ಸಿದ್ದರಾಮಯ್ಯ ಬುಧವಾರ ನಡೆಸಿದ ರಹಸ್ಯ ಸಭೆಯಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ನ ಪ್ರಚಾರ ಸಭೆಯಲ್ಲಿ ಭಾಗವಹಿಸಲೇಬೇಕೆಂಬ ಕಟ್ಟಾಜ್ಞೆ ಹೊರಡಿಸಿಲ್ಲ. ಬದಲಾಗಿ ಅವರವರ ವಿವೇಚನೆಗೆ ಬಿಡುವುದರ ಮೂಲಕ ಕಾಂಗ್ರೆಸ್ಸಿಗರು ಸ್ವತಂತ್ರವಾಗಿ ಜೆಡಿಎಸ್‌ ಪರವಾಗಿ ಚುನಾವಣಾ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಅವರ ಉಪಸ್ಥಿತಿಯ ನಡುವೆ ಕಾಂಗ್ರೆಸ್‌ ನಾಯಕರ ಬೆಂಬಲವನ್ನು ಘೋಷಿಸುವಲ್ಲಿ ಸಫ‌ಲರಾಗಿರುವ ಸಿದ್ದರಾಮಯ್ಯ, ಮೊದಲ ಹಂತವಾಗಿ ಕಾಂಗ್ರೆಸ್‌ ಮುಖಂಡರ ಮನವೊಲಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಆಯಾಯ ಕ್ಷೇತ್ರದ ಮಾಜಿ ಶಾಸಕರು ಚುನಾವಣಾ ದಿನದೊಳಗೆ ಹಂತ, ಹಂತವಾಗಿ ಕಾಂಗ್ರೆಸ್‌ ಮನಸ್ಥಿತಿಗಳನ್ನು ಜೆಡಿಎಸ್‌ ಮತಗಳನ್ನಾಗಿ ಪರಿವರ್ತಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವರೋ ಅಥವಾ ಮತದಾನದ ನಿಲುವನ್ನು ಕಾರ್ಯಕರ್ತರ ವಿವೇಚನೆಗೆ ಬಿಟ್ಟು ಬಿಡುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.