ಸಿಎಂ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್
Team Udayavani, Jun 6, 2018, 6:00 AM IST
ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಂಗಳವಾರ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮೈಸೂರಿನಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕುರಿತಂತೆ ಸಮಾಲೋಚನೆ ನಡೆಸಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್, ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ನೀಡಿದ ಭೂಮಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಮಧ್ಯೆ
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಿಸಲು ತಾವು ಉದ್ದೇಶಿಸಿದ್ದು, ಸರ್ಕಾರದಿಂದ ಅಗತ್ಯ ನೆರವು ನೀಡುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ. ಆದರೆ, ಈಗ ತಾನೇ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಸಂಪುಟ ವಿಸ್ತರಣೆ, ಖಾತೆಗಳ ಹಂಚಿಕೆ ಮುಂತಾದ ಕೆಲಸಗಳು ಬಾಕಿ ಇವೆ. ಇದು ಮುಗಿದ ಬಳಿಕ ಮತ್ತೂಮ್ಮೆ ಈ ಕುರಿತು ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ