ಎಲ್ಲ ಶಾಲೆಗಳಲ್ಲಿ ಸ್ಕೌಟ್ಸ್ ಗೈಡ್ಸ್ ಕಡ್ಡಾಯಕ್ಕೆ ಸಿಎಂ ಸೂಚನೆ
Team Udayavani, Jun 8, 2018, 6:40 AM IST
ಬೆಂಗಳೂರು: ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಅವರ ನೇತೃತ್ವದ ನಿಯೋಗದ ಜತೆ ಮಾತನಾಡಿದ ಅವರು, ಪದವಿ ಪೂರ್ವ ಮತ್ತು ಪದವಿ ಶಿಕ್ಷಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಪಾಲ್ಗೊಳ್ಳುವಂತೆ
ಪ್ರೋತ್ಸಾಹಿಸಬೇಕೆಂದು ಸಲಹೆ ನೀಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ನೀಡಲು ಶಿಕ್ಷಕರನ್ನು ತರಬೇತಿಗೊಳಿಸಬೇಕಾಗಿದೆ. ಅದಕ್ಕೆ ಬೇಕಾದ ಸಹಕಾರವನ್ನು ರಾಜ್ಯ ಸರ್ಕಾರ ನೀಡಲು ಸಿದ್ಧವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.