CONNECT WITH US  

ಸಚಿವ ಸ್ಥಾನಕ್ಕೆ ಪಟ್ಟು; ಎಐಸಿಸಿಗೆ ಸತೀಶ್ ಜಾರಕಿಹೊಳಿ ರಾಜೀನಾಮೆ?

ಬೆಂಗಳೂರು: ಸಂಪುಟದಲ್ಲಿ ಸ್ಥಾನ ದೊರೆಯದಿರುವ ಕಾಂಗ್ರೆಸ್ ಶಾಸಕರ ಬಂಡಾಯ ಶಮನಗೊಳಿಸುವ ಸರ್ಕಸ್ ಮುಂದುವರಿಸಿರುವ ನಡೆವೆಯೇ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಮಾಧ್ಯಮದ ವರದಿ ತಿಳಿಸಿದೆ.

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ಯಮಕನಮರಡಿಯಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮೂಹಿಕ ರಾಜೀನಾಮೆಗೆ ಸಿದ್ಧತೆ?

ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲಿಲ್ಲ ಎಂಬ ಕಾರಣಕ್ಕೆ ಜಾರಕಿಹೊಳಿ ಬೆಂಬಲಿಗರು ಜಿ.ಪಂ, ತಾ.ಪಂ ಸದಸ್ಯರು ಸಾಮೂಹಿಕ ರಾಜೀನಾಮೆ ಕೊಡಲು ಸಿದ್ಧತೆ ನಡೆಸಿರುವುದಾಗಿ ವರದಿ ತಿಳಿಸಿದೆ.

25 ತಾಲೂಕು ಪಂಚಾಯ್ತ ಸದಸ್ಯರು, 15 ಜಿಲ್ಲಾ ಪಂಚಾಯ್ತಿ ಸದಸ್ಯರು ರಾಜೀನಾಮೆ ಕೊಡಲು ಚಿಂತನೆ ನಡೆಸಿರುವುದಾಗಿ ಜಾರಕಿಹೊಳಿ ಬೆಂಬಲಿಗ ಮಲ್ಲನಗೌಡ ಪಾಟೀಲ್ ಮಾಧ್ಯಮವೊಂದರ ಜತೆ ಮಾತನಾಡುತ್ತ ವಿವರಿಸಿದ್ದಾರೆ.

Trending videos

Back to Top