ಎಐಸಿಸಿಗೆ ರಾಜೀನಾಮೆ ನೀಡುವೆ: ಸತೀಶ

Team Udayavani, Jun 9, 2018, 6:35 AM IST

satish-jarkiholiddd.jpg

ಬೆಳಗಾವಿ: ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ತೀವ್ರ ಅಸಮಾಧಾನವಿದೆ. ನನ್ನ ಬೆಂಬಲಿಗರಿಗೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅನೇಕ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎರಡು ದಿನದಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ನನ್ನ ಕ್ಷೇತ್ರ ವ್ಯಾಪ್ತಿ ಕೇವಲ ಯಮಕನಮರಡಿ ಅಲ್ಲ. ಇಡೀ ರಾಜ್ಯಾದ್ಯಂತ ಪಕ್ಷ ಸಂಘಟಿಸುವ ಕೆಲಸ ಮಾಡುತ್ತ ಬಂದಿದ್ದೇನೆ. ನನಗೆ ಸಚಿವ ಸ್ಥಾನ ತಪ್ಪಿಸಿದವರು ಬೆಂಗಳೂರು ಹಾಗೂ ದೆಹಲಿಯಲ್ಲಿದ್ದಾರೆ. ವಾರದೊಳಗೆ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ’ ಎಂದರು.

ರಾಜೀನಾಮೆಗೆ 55 ಸದಸ್ಯರ ನಿರ್ಧಾರ: ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದೆ ಇರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ 14 ಜಿಪಂ ಸದಸ್ಯರು, 28 ತಾಪಂ, ನಾಲ್ವರು ಎಪಿಎಂಸಿ, ಇಬ್ಬರು ಮಹಾನಗರಪಾಲಿಕೆ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಶುಕ್ರವಾರ ಸತೀಶ ಜಾರಕಿಹೊಳಿ ನಿವಾಸದಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸದಸ್ಯರು, ಒಟ್ಟು 55ಕ್ಕೂ ಹೆಚ್ಚು ಪದಾಧಿಕಾರಿಗಳು ಈಗ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇದರಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸಹ ಸೇರಿದ್ದಾರೆ ಎಂದರು.

ಪಾಟೀಲ ಬೆಂಬಲಿಗರಿಂದ 11ರಂದು ವಿಜಯಪುರ ಬಂದ್‌
ವಿಜಯಪುರ
: ಬಬಲೇಶ್ವರ ಶಾಸಕ ಡಾ.ಎಂ.ಬಿ. ಪಾಟೀಲ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜತೆಗೆ ಜಲ ಸಂಪನ್ಮೂಲ ಖಾತೆ ನೀಡುವಂತೆ ಆಗ್ರಹಿಸಿ ಸೋಮವಾರ ವಿಜಯಪುರ ಬಂದ್‌ಗೆ ಕರೆ ನೀಡಲು ಬೆಂಬಲಿಗರು ನಿರ್ಧರಿಸಿದ್ದಾರೆ. 

ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಸಾರ್ವಜನಿಕ ಸಂರ್ಪಕಾ ಧಿಕಾರಿ ಡಾ.ಮಹಾಂತೇಶ ಬಿರಾದಾರ, ಭವಿಷ್ಯದ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಅವರನ್ನು ರಾಜಕೀಯವಾಗಿ ತುಳಿಯುವ ಹುನ್ನಾರ ನಡೆದಿದೆ. ಹೀಗಾಗಿ ಸೋಮವಾರ ಮಾಜಿ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲು ಯೋಜಿಸಲಾಗುತ್ತಿದೆ. ಶನಿವಾರ, ಈ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.