ಸಚಿವ ಸ್ಥಾನ ವಂಚಿತ ಬೆಂಬಲಿಗರ ಪ್ರತಿಭಟನೆ
Team Udayavani, Jun 10, 2018, 6:10 AM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರ ಪ್ರತಿಭಟನೆ ಶನಿವಾರವೂ
ಮುಂದುವರಿಯಿತು. ಎಚ್.ಕೆ.ಪಾಟೀಲ್ಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಆಗ್ರಹಿಸಿ ಪಕ್ಷದ
ಕಾರ್ಯಕರ್ತರು, ಬೆಂಬಲಿಗರು ಗದಗದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿ, ಟೈರ್ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸಂಚಾರಕ್ಕೆ ಅಡ್ಡಿ ಪಡಿಸಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ಬೆಂಬಲಿಗರು ಬೆಂಗಳೂರಿನ ಕೆಪಿಸಿಸಿ ಕಚೇರಿ, ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ಇದೇ ವೇಳೆ, ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕರ ಬೆಂಬಲಿಗರು ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಿದರು.
ನನ್ನ ನಿಲುವನ್ನು ಮಂಗಳವಾರ ತಿಳಿಸುತ್ತೇನೆ. ಡಿ.ಕೆ.ಶಿವಕುಮಾರ್ ಹಾಗೂ ರೋಷನ್ ಬೇಗ್ ಜತೆ ಪಕ್ಷದ ವಿಚಾರ ಮಾತನಾಡಿದ್ದೇನೆ.ನನ್ನ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿ ಸಚಿವ ಸ್ಥಾನಕ್ಕಾಗಿ ಒತ್ತಡ
ಹಾಕುತ್ತಿದ್ದಾರೆ. ಸಚಿವ ಸ್ಥಾನ ಪ್ರತಿಭಟನೆ ಮಾಡಿ ಪಡೆಯುವಂತದ್ದಲ್ಲ, ಇದು ಸೂಕ್ಷ್ಮ ವಿಚಾರ.
– ಎಚ್.ಕೆ.ಪಾಟೀಲ್, ಸಚಿವ ಸ್ಥಾನ ವಂಚಿತ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು