CONNECT WITH US  

ಸಾಲ ನೀಡಲು ವಿಳಂಬ: ಆತ್ಮಹತ್ಯೆ ಯತ್ನ

ಸಾಂದರ್ಭಿಕ ಚಿತ್ರ

ಹರಪನಹಳ್ಳಿ: ಸಾಲ ನೀಡಲು ಬ್ಯಾಂಕ್‌ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ ರೈತನೊಬ್ಬ ಬ್ಯಾಂಕ್‌ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಹಲುವಾಗಲು ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್‌ನಲ್ಲಿ ಮಂಗಳವಾರ ನಡೆದಿದೆ. ನಿಟ್ಟೂರು ಗ್ರಾಮದ ಪ್ರಕಾಶ್‌(35) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತ. ಇವರು ಕಳೆದ ನಾಲ್ಕು ತಿಂಗಳಿನಿಂದಲೂ ಸಾಲ ಪಡೆಯಲು ಬ್ಯಾಂಕ್‌ಗೆ ಅಲೆದಾಡುತ್ತಿದ್ದರು.

ಬ್ಯಾಂಕ್‌ ಅಧಿಕಾರಿಗಳು ವಿನಾಕಾರಣ ಸಾಲ ನೀಡಲು ವಿಳಂಬ ಮಾಡುತ್ತಿದ್ದಾರೆಂದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡ ರೈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Trending videos

Back to Top