ಸಾಲ ನೀಡಲು ವಿಳಂಬ: ಆತ್ಮಹತ್ಯೆ ಯತ್ನ
Team Udayavani, Jun 13, 2018, 6:00 AM IST
ಹರಪನಹಳ್ಳಿ: ಸಾಲ ನೀಡಲು ಬ್ಯಾಂಕ್ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿ ರೈತನೊಬ್ಬ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಹಲುವಾಗಲು ಗ್ರಾಮದ ಪ್ರಗತಿ ಕೃಷ್ಣ ಬ್ಯಾಂಕ್ನಲ್ಲಿ ಮಂಗಳವಾರ ನಡೆದಿದೆ. ನಿಟ್ಟೂರು ಗ್ರಾಮದ ಪ್ರಕಾಶ್(35) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತ. ಇವರು ಕಳೆದ ನಾಲ್ಕು ತಿಂಗಳಿನಿಂದಲೂ ಸಾಲ ಪಡೆಯಲು ಬ್ಯಾಂಕ್ಗೆ ಅಲೆದಾಡುತ್ತಿದ್ದರು.
ಬ್ಯಾಂಕ್ ಅಧಿಕಾರಿಗಳು ವಿನಾಕಾರಣ ಸಾಲ ನೀಡಲು ವಿಳಂಬ ಮಾಡುತ್ತಿದ್ದಾರೆಂದು ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಅಸ್ವಸ್ಥಗೊಂಡ ರೈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲುವಾಗಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ