ಕೈಗೆ ಸೌಮ್ಯ ಜಯ; ಬಿಜೆಪಿ ಭದ್ರಕೋಟೆ ಜಯನಗರ ಕಾಂಗ್ರೆಸ್‌ ಪಾಲು


Team Udayavani, Jun 14, 2018, 6:00 AM IST

13bnp-21.jpg

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಗಳಿಸಿದ್ದು, ಆ ಮೂಲಕ ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಸದಸ್ಯ ಬಲ 15ಕ್ಕೆ ಏರಿಕೆಯಾಗಿದೆ. ಜತೆಗೆ ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರದ ಸಂಖ್ಯಾಬಲ ವೃದ್ಧಿಸಿದೆ.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ 54457 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ತೀವ್ರ ಸ್ಪರ್ಧೆಯೊಡ್ಡಿದ ಬಿಜೆಪಿಯ ಬಿ.ಎನ್‌.ಪ್ರಹ್ಲಾದ್‌ಬಾಬು ಅವರು 2,889 ಮತಗಳ ಕಡಿಮೆ ಅಂತರದಿಂದ ಪರಾಭವಗೊಂಡಿದ್ದಾರೆ. ಇವರು ಕ್ಷೇತ್ರದಲ್ಲಿ ಕಳೆದ 2 ಅವಧಿಗೆ ಶಾಸಕರಾಗಿದ್ದು ಚುನಾವಣೆ ಹೊತ್ತಲ್ಲಿ ನಿಧನ ಹೊಂದಿದ ಬಿ.ಎನ್‌.ವಿಜಯಕುಮಾರ್‌ ಅವರ ಸಹೋದರರಾಗಿದ್ದಾರೆ. ವಿಭಿನ್ನ ರೀತಿಯ ಪ್ರಚಾರ, ಮತದಾರರ ಜಾಗೃತಿ ಮೂಲಕ ಗಮನ ಸೆಳೆದಿದ್ದ ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾರೆಡ್ಡಿ ಕೇವಲ 1861 ಮತಗಳನ್ನಷ್ಟೇ ಪಡೆದು ಠೇವಣಿ ಕಳೆದುಕೊಂಡಿದ್ದಾರೆ.

ತಂದೆಯ ಹಳೆಯ ಕ್ಷೇತ್ರಕ್ಕೆ ಪುತ್ರಿ ಶಾಸಕಿ
ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಜಯನಗರ ಕ್ಷೇತ್ರಕ್ಕೆ ಇದೀಗ ಅವರ ಪುತ್ರಿ ಸೌಮ್ಯಾರೆಡ್ಡಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. 2008ರ ಕ್ಷೇತ್ರ ಪುನರ್‌ವಿಂಗಡಣೆಗೂ ಮೊದಲು ರಾಮಲಿಂಗಾರೆಡ್ಡಿ ಅವರು ಜಯನಗರ ಕ್ಷೇತ್ರದಿಂದಲೇ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ಬಿಟಿಎಂ ಲೇಔಟ್‌ನಿಂದ ಸ್ಪರ್ಧಿಸಲಾರಂಭಿಸಿದ ರಾಮಲಿಂಗಾರೆಡ್ಡಿ ಈವರೆಗೆ ಆ ಕ್ಷೇತ್ರದಿಂದಲೂ ಮೂರು ಬಾರಿ ಆಯ್ಕೆಯಾಗಿದ್ದಾರೆ. ಪುತ್ರಿಯ ರಾಜಕೀಯ ಪ್ರವೇಶಕ್ಕೆ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿಯಾದ ಅವರು ಸೌಮ್ಯಾ ರೆಡ್ಡಿ ಗೆಲುವಿನಲ್ಲೂ ಮಹತ್ವದ ಪಾತ್ರ ವಹಿಸಿದ್ದಾರೆ. ತಂದೆಯ ಹಳೆಯ ಕ್ಷೇತ್ರದ ಪ್ರತಿನಿಧಿಯಾಗಿ ಪುತ್ರಿ ಚುನಾಯಿತರಾಗಿದ್ದಾರೆ.

ಕಾಂಗ್ರೆಸ್‌ ಸಂಖ್ಯಾಬಲ ಹೆಚ್ಚಳ
ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಗಳಿಸುವ ಮೂಲಕ ಕಾಂಗ್ರೆಸ್‌ನ ಸದಸ್ಯ ಬಲ 79ಕ್ಕೆ ಏರಿಕೆಯಾಗುವ ಜತೆಗೆ ವಿಧಾನಸಭೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರ್ಕಾರದ ಸಂಖ್ಯಾಬಲಕ್ಕೆ ಮತ್ತೂಂದು ಸ್ಥಾನ  ಸೇರ್ಪಡೆಯಾಗಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ 78 ಸ್ಥಾನ ಗಳಿಸಿತ್ತು. ನಂತರ ಶಾಸಕ ಸಿದ್ದು ನ್ಯಾಮಗೌಡ ನಿಧನದಿಂದ ಸದಸ್ಯರ ಸಂಖ್ಯೆ 77ಕ್ಕೆ ಕುಸಿಯಿತು. ಬಳಿಕ ನಡೆದ ರಾಜರಾಜೇಶ್ವರಿನಗರ ಹಾಗೂ ಜಯನಗರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯ ಗಳಿಸಿದ್ದು, ಸದಸ್ಯ ಬಲ 79ಕ್ಕೆ ಏರಿಕೆಯಾಗಿದೆ.

ಜತೆಗೆ ಬೆಂಗಳೂರಿನಲ್ಲೂ ಕಾಂಗ್ರೆಸ್‌ ಸದಸ್ಯಬಲ ವೃದ್ಧಿಸಿದೆ. ಬೆಂಗಳೂರು ವ್ಯಾಪ್ತಿಯ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 15 ಸ್ಥಾನ ಪಡೆದಿದೆ. ನಗ ರ ದಲ್ಲಿ ಬಿಜೆಪಿ 11, ಜೆಡಿ ಎಸ್‌  2 ಸ್ಥಾನ ಗ ಳನ್ನು ಪಡೆ ದು ಕೊಂಡಿವೆ. 2013ರ ಚುನಾವಣೆ ಫ‌ಲಿತಾಂಶಕ್ಕೆ ಹೋಲಿಸಿದರೆ ಕಾಂಗ್ರೆಸ್‌ ಶಾಸಕರ ಸಂಖ್ಯೆ 13ರಿಂದ 15ಕ್ಕೆ ವೃದ್ಧಿಸಿದ್ದರೆ, ಬಿಜೆಪಿ ಹಾಗೂ ಜೆಡಿಎಸ್‌ ತಲಾ ಒಂದು ಸ್ಥಾನ ಕಳೆದುಕೊಂಡಂತಾಗಿದೆ.

ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವ ಬಗ್ಗೆ ಮೊದಲೇ ಗೊತ್ತಿತ್ತು, ಸಮ್ಮಿಶ್ರ ಸರ್ಕಾರವನ್ನು ಜನ ಒಪ್ಪಿದ್ದಾರೆಂಬ ಸಂದೇಶ ಜಯನಗರ ಫ‌ಲಿತಾಂಶದಿಂದ ದೊರೆತಿದೆ. ಅಭಿವೃದ್ಧಿ ವಿಚಾರದಲ್ಲಿ ನಾನು ಮೋದಿಗಿಂತ ಮುಂದಿದ್ದೇನೆ.
– ಎಚ್‌.ಡಿ.ಕುಮಾರಸ್ವಾಮಿ

ಈ ಗೆಲುವು ಕಾಂಗ್ರೆಸ್‌ ಗೆಲುವೇ ಹೊರತು ಮೈತ್ರಿ ಸರ್ಕಾರದ ಗೆಲುವಲ್ಲ. ಜಯನಗರದಲ್ಲಿ ನಮ್ಮ ಗೆಲುವು ನಿರೀಕ್ಷಿತ. ಈ ಹಿಂದೆಯೇ ಚುನಾವಣೆ ನಡೆದಿದ್ದರೂ ನಾವೇ ಗೆಲ್ಲುತ್ತಿ¨ªೆವು. ಅದರಂತೆ ಈಗಲೂ ನಾವೇ ಗೆದ್ದಿದ್ದೇವೆ.
– ಸಿದ್ದರಾಮಯ್ಯ

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಬಾಬು ಅವರು 2,889 ಮತಗಳ ಕಡಿಮೆ ಅಂತರದಿಂದ ಪರಾಭವಗೊಂಡಿದ್ದಾರೆ. ಮತದಾರರ ತೀರ್ಪನ್ನು ಗೌರವಿಸುತ್ತೇವೆ. ಕಳೆದ ಬಾರಿಗಿಂತ ಈ ಕ್ಷೇತ್ರದಲ್ಲಿ ಬಿಜೆಪಿ ಸುಮಾರು 7 ಸಾವಿರ ಅಧಿಕ ಮತಗಳನ್ನು ಪಡೆದಿದೆ.
– ಬಿ.ಎಸ್‌.ಯಡಿಯೂರಪ್ಪ

ಅಭ್ಯರ್ಥಿಗಳ ಮತ ಗಳಿಕೆ ವಿವರ
ಸೌಮ್ಯಾರೆಡ್ಡಿ (ಕಾಂಗ್ರೆಸ್‌)- 54,457
ಬಿ.ಎನ್‌.ಪ್ರಹ್ಲಾದ್‌ಬಾಬು (ಬಿಜೆಪಿ)- 51,568
ರವಿಕೃಷ್ಣಾರೆಡ್ಡಿ (ಪಕ್ಷೇತರ)- 1861
ಪ್ರಸ್ತುತ ವಿಧಾನಸಭೆ ಬಲಾಬಲ
ಒಟ್ಟು ಸ್ಥಾನ-224
ಖಾಲಿ ಇರುವ ಸ್ಥಾನ 2 (ರಾಮನಗರ, ಜಮಖಂಡಿ)
ಬಿಜೆಪಿ-104
ಕಾಂಗ್ರೆಸ್‌-79
ಜೆಡಿಎಸ್‌-36
ಬಿಎಸ್‌ಪಿ-1
ಕೆಪಿಜೆಪಿ-1
ಪಕ್ಷೇತರ-1

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.