CONNECT WITH US  

ಮುಗಿಯದ ಬಂಡಾಯ:ಖಾದರ್‌‌, ಜಮೀರ್‌ ವಿರುದ್ಧ ಸಿಡಿದೆದ್ದ ತನ್ವೀರ್ ಸೇಠ್!

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ವಂಚಿತರ ಅಸಮಾಧಾನ ಮುಂದುವರಿದಿದ್ದು,ಮಾಜಿ ಶಾಸಕ  ತನ್ವೀರ್ ಸೇಠ್ ಅವರು ಸಚಿವ ಜಮೀರ್‌ ಅಹ್ಮದ್‌ ವಿರುದ್ಧ  ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. 

ತನ್ವೀರ್ ಸೇಠ್ ಅವರು ಗುರುವಾರ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿ ತಮ್ಮ ಅಸಮಧಾನ ತೋಡಿಕೊಂಡು ಜಮೀರ್‌ ವಿರುದ್ಧ ದೂರು ನೀಡಿದ್ದಾರೆ. 

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೇ ಮುಸ್ಲಿಂ ಸಮುದಾಯ ಪ್ರತಿನಿಧಿಸುವ ಇನ್ನೋರ್ವ ನಾಯಕರಿಗೆ ಸಚಿವ ಸ್ಥಾನ ನೀಡಬೇಕಾಗಿದೆ. ಈಗ ನೀಡಲಾಗಿರುವ ಖಾದರ್‌ ಮತ್ತು ಜಮೀರ್‌ ಅಹಮದ್‌ ಖಾನ್‌ ಅವರು ಸಮರ್ಥರಲ್ಲ ಎಂದರು. 

ಬೇರೆ ಪಕ್ಷದಿಂದ ಬಂದ ಜಮೀರ್‌ಗೆ ಸಚಿವ ಸ್ಥಾನ ನೀಡಲಾಗಿದೆ. ಜಮೀರ್‌ ನನ್ನನ್ನು ಸೋಲಿಸಲು ಹುನ್ನಾರ ನಡೆಸಿದ್ದರು. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರಿಗೆ ತಿಳಿಸಲು ಹೇಳಿದ್ದೇನೆ ಎಂದು ಅಸಮಾಧಾನ ಹೊರ ಹಾಕಿದರು. 

Trending videos

Back to Top