ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ
Team Udayavani, Jun 17, 2018, 6:45 AM IST
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ ಸಿಕ್ಕಿದ್ದು, ಜೂ.18ರಿಂದ ಕೌನ್ಸೆಲಿಂಗ್
ಆರಂಭವಾಗುವ ಸಾಧ್ಯತೆ ಇದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಅವರ ನೇತೃತ್ವದಲ್ಲಿ
ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ವಯ
ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಈ ಹಿಂದಿನ ಸರ್ಕಾರ ರೂಪಿಸಿದ್ದ ನೀತಿ ನಿಯಮದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.
ಶೇ.8ರಷ್ಟಿದ್ದ ವರ್ಗಾವಣೆ ಪ್ರಮಾಣವನ್ನು ಶೇ.15ಕ್ಕೆ ಏರಿಸಲಾಗಿದೆ. ಜಿಲ್ಲೆಯ ಹೊರಗೆ ಶೇ.3 ಹಾಗೂ ಜಿಲ್ಲೆಯ
ಒಳಗೆ ಶೇ.5ರಷ್ಟು ವರ್ಗಾವಣೆಗೆ ಅವಕಾಶ ಇದೆ. ಒಟ್ಟು ಮಂಜುರಾದ ಶಿಕ್ಷಕರ ಹುದ್ದೆಗಳಲ್ಲಿ ಶೇ.20ರಷ್ಟು ಖಾಲಿ
ಇದ್ದರೆ ಅಂತಹ ಜಿಲ್ಲೆಯ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಕರುಣಿಸದೇ ಇರುವ ಬಗ್ಗೆ ಚರ್ಚೆ ಇನ್ನು ಇತ್ಯರ್ಥವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ