‘ಯೋಗದಿಂದ ಒತ್ತಡರಹಿತ ಜೀವನ’


Team Udayavani, Jun 22, 2018, 10:07 AM IST

22-june-1.jpg

ಮಹಾನಗರ: ವಿಶ್ವಕ್ಕೇ ಭಾರತ ನೀಡಿದ ಅತಿದೊಡ್ಡ ಕೊಡುಗೆ ಯೋಗ. ಯೋಗದಿಂದ ಒತ್ತಡರಹಿತ ಜೀವನ ನಡೆಸಲು ಸಾಧ್ಯ ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು. ಟಿ. ಖಾದರ್‌ ಅವರು ಹೇಳಿದರು. ದ.ಕ. ಜಿಲ್ಲಾಡಳಿತ ಮತ್ತು ಆಯುಷ್‌ ಇಲಾಖೆ ವತಿಯಿಂದ ನಗರದ ಮಂಗಳಾ ಸ್ಟೇಡಿಯಂನ ಯು. ಎಸ್‌. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅವರು ಗುರುವಾರ ಉದ್ಘಾಟಿಸಿದರು.

ಆಯುಷ್ಯ ವೃದ್ಧಿ
ವಿಶ್ವಮಾನ್ಯತೆ ಪಡೆದಿರುವ ಯೋಗವನ್ನು ಅನೇಕ ರಾಷ್ಟ್ರಗಳು ಒಪ್ಪಿಕೊಂಡು ಪಾಲಿಸುತ್ತಿವೆ. ಆರೋಗ್ಯ ವರ್ಧನೆಯೊಂದಿಗೆ ಒತ್ತಡ ನಿವಾರಣೆ, ಮನೋನಿಗ್ರಹಕ್ಕೂ ಯೋಗ ಪೂರಕ. ಪ್ರಾಣಯಾಮ, ದೀರ್ಘ‌ ಉಸಿರಾಟದಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಆರ್‌. ಪಿ.ನಾಯ್ಕ, ದ.ಕ. ಜಿ. ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು, ಜಿ.ಪಂ. ಸಿಇಒ ಡಾ| ಎಂ.ಆರ್‌. ರವಿ, ಅಪರ ಜಿಲ್ಲಾಧಿಕಾರಿ ವೈಶಾಲಿ, ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕಿ ಡಾ| ರಾಜೇಶ್ವರಿ ದೇವಿ ಎಚ್‌.ಆರ್‌., ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್‌ ಡಿ’ಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಮಹಮ್ಮದ್‌ ಇಕ್ಬಾಲ್ ಸ್ವಾಗತಿಸಿದರು. ನಿವೃತ್ತ ಅಧಿಕಾರಿ ಡಾ| ದೇವದಾಸ್‌ ಪುತ್ರನ್‌ ವಂದಿಸಿದರು. ಡಾ| ಶೋಭಾರಾಣಿ ನಿರೂಪಿಸಿದರು. ಬಳಿಕ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಯಿತು.

ಏಕಾಗ್ರತೆಗೆ ಯೋಗ ಸಹಕಾರಿ
ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಮನಸ್ಸಿನ ಏಕಾಗ್ರತೆಗೆ ಯೋಗ ಸಹಕಾರಿಯಾಗುತ್ತದೆ. ಯೋಗಕ್ಕೆ ಜಾತಿ, ಧರ್ಮದ ಹಂಗಿಲ್ಲ. ವ್ಯಕ್ತಿತ್ವ ವಿಕಸನಕ್ಕೆ ಯೋಗ ಪೂರಕ ಎಂದರು. ಯೋಗ ಪ್ರಾತ್ಯಕ್ಷಿಕೆಯ ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಲಾಯಿತು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.