ಶೀಘ್ರ 16 ಸಾವಿರ ಶಿಕ್ಷಕರ ನೇಮಕ
Team Udayavani, Jun 26, 2018, 6:30 AM IST
ಧಾರವಾಡ: ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದು, ಈಗಾಗಲೇ 10 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನುಳಿದ ಹುದ್ದೆಗಳನ್ನೂ ಭರ್ತಿ ಮಾಡಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಇಟಿ ಫಲಿತಾಂಶ ಬಿಡುಗಡೆ ಸಂದರ್ಭದಲ್ಲಿ ಆನ್ಲೈನ್ನಲ್ಲಿ ತಾಂತ್ರಿಕ ದೋಷಗಳು ಎದುರಾದ ಕಾರಣ ಕೆಲ ಸಮಸ್ಯೆಗಳು ಉದ್ಭವಿಸಿವೆ. ಆದಷ್ಟು ಶೀಘ್ರದಲ್ಲಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು.
ಶಾಲೆಗಳ ಕಟ್ಟಡ ದುರಸ್ತಿ ಸಮಸ್ಯೆ ಎಲ್ಲ ಕಡೆಗಳಲ್ಲೂ ಇದೆ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಅನುದಾನದಲ್ಲಿ ರಾಜ್ಯದ ಎಲ್ಲ ಶಾಲೆಗಳ ಕಟ್ಟಡ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುವಂತಿಲ್ಲ. ಒಂದು ವೇಳೆ ಮಕ್ಕಳಿಗೆ ಕಠಿಣ ಶಿಕ್ಷೆ ನೀಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ