ಕೋಳಿವಾಡ ವಿರುದ್ಧ ಲೋಕಾಕ್ಕೆ ದೂರು
Team Udayavani, Jun 27, 2018, 6:00 AM IST
ಬೆಂಗಳೂರು: ಕರ್ನಾಟಕ ವಿಧಾನಸಭಾ ಸಚಿವಾಲಯದ ವಿವಿಧ ಹುದ್ದೆಗಳ ನೇರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹಾಗೂ ಕಾರ್ಯದರ್ಶಿ ಎಸ್. ಮೂರ್ತಿ ವಿರುದಟಛಿ ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಕಾನೂನು
ಮತ್ತು ನಿಯಮಗಳಿಗೆ ವಿರುದ್ಧಛಿವಾಗಿ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಪ್ರಸನ್ನಕುಮಾರ್ ಎಂಬುವರು ಮಂಗಳವಾರ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಂಜಯ್ ಸಹಾಯ್ ಅವರಿಗೆ ದೂರು ನೀಡಿದ್ದಾರೆ ವಿಧಾನಸಭೆ ಸಚಿವಾಲಯದಲ್ಲಿ ನಿಯಮಗಳನ್ನು ಪಾಲಿಸದೆ 2017ರ ಫೆ.23 ರಿಂದ 25ರವರೆಗೆ ತರಾತುರಿಯಲ್ಲಿ ಸಂದರ್ಶನ ನಡೆಸಿ 191 ಮಂದಿಯನ್ನು ವಿವಿಧ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ವ್ಯಾಪಕ ಅಕ್ರಮ ಮತ್ತು ಭ್ರಷ್ಟಾಚಾರ ನಡೆದಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಹುದ್ದೆಗಳನ್ನು ಸೃಷ್ಟಿವಂತಿಲ್ಲ. ಆದರೆ, 2018ರ ವಿಧಾನಸಭೆ ಚುನಾವಣೆಗೆ ಒಂದು ವಾರದ ಮೊದಲು ಹೊಸದಾಗಿ 107 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಈ ಎರಡೂ ಪ್ರಕರಣಗಳನ್ನು ತಕ್ಷಣ
ತನಿಖೆಗೊಳಪಡಿಸಿಬೇಕು ಎಂದು ದೂರಿನಲ್ಲಿ ಕೋರಲಾಗಿದೆ. ಕೆ.ಬಿ.ಕೋಳಿವಾಡ, ಎಸ್.ಮೂರ್ತಿ, ಸ್ಪೀಕರ್ ಅವರ ವಿಶೇಷ ಅಧಿಕಾರಿಯಾಗಿದ್ದ ತಿಪ್ಪೇಸ್ವಾಮಿ ವಿರುದ್ಧ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕರಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ