CONNECT WITH US  

ಸಿದ್ದು ಜತೆ ಚರ್ಚಿಸಲು ಖರ್ಗೆಗೆ ಜವಾಬ್ದಾರಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಹಾಗೂ ಕೆಲವೊಂದು ನಿರ್ಧಾರಗಳ ಬಗ್ಗೆ ಅಸಮಾಧಾನಗೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲು ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೈಕಮಾಂಡ್‌ ಜವಾಬ್ದಾರಿ ವಹಿಸಿದೆ ಎಂದು ತಿಳಿದು ಬಂದಿದೆ. 

ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳಿಂದ ಸರ್ಕಾರದ ಭವಿಷ್ಯದ ಬಗ್ಗೆ ಪಕ್ಷದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವುದರಿಂದ ಈ ಬಗ್ಗೆ ಸಿದ್ದರಾಮಯ್ಯ ಅವರಿಂದಲೇ ಸ್ಪಷ್ಟನೆ ಪಡೆಯಲು ಹೈ ಕಮಾಂಡ್‌ ಖರ್ಗೆ ಅವರಿಗೆ ಸೂಚಿಸಿದೆ. ಈ ಹಿನ್ನೆಲೆ ಖರ್ಗೆ ಶನಿವಾರ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.


Trending videos

Back to Top