CONNECT WITH US  

ಬಿಜೆಪಿಯ ಕೆಲವು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಜಾರಕಿಹೊಳಿ

ಬೆಳಗಾವಿ: ಬಿಜೆಪಿ ಕೆಲವು ಶಾಸಕರು ಕಾಂಗ್ರೆಸ್‌ ಸೇರುವ ಸಂಬಂಧ ತಮ್ಮ ಜತೆ ಸಂಪರ್ಕದಲ್ಲಿದ್ದಾರೆ ಎಂದು ಸಚಿವ
ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ನಗರದ ಸುವರ್ಣ ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಿಂದ 27 ಶಾಸಕರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆಂಬ ಬಿಜೆಪಿ ನಾಯಕರ ಹೇಳಿಕೆ ಸಂಪೂರ್ಣ ಸುಳ್ಳು ಹಾಗೂ ನಿರಾಧಾರವಾದುದು. ಕಾಂಗ್ರೆಸ್‌ನ ಒಬ್ಬ ಶಾಸಕರೂ ಬಿಜೆಪಿ ಸೇರಲು ಆಸಕ್ತಿ ತೋರಿಸಿಲ್ಲ. ಬದಲಾಗಿ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್‌ ಸೇರುವ ಸಂಬಂಧ ತಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಅವರ ಸೇರ್ಪಡೆ ವಿಚಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ನೋಡಿಕೊಳ್ಳುತ್ತದೆ ಎಂದರು.

ಕಾಂಗ್ರೆಸ್‌ ವರಿಷ್ಠರಿಂದ ಉಕ ಭಾಗಕ್ಕೆ ನ್ಯಾಯ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪಾಟೀಲ, ಎಚ್‌.ಕೆ.ಪಾಟೀಲ
ಹಾಗೂ ಸತೀಶ ಜಾರಕಿಹೊಳಿ ಹೆಸರು ಕೇಳಿ ಬರುತ್ತಿದ್ದು, ಈ ಮೂವರಲ್ಲಿ ಯಾರಿಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡಿದರೂ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಯಾಗಲಿದೆ. ಸಮ್ಮಿಶ್ರ ಸರಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆ¿ಲ್ಲಿ ಕಾಂಗ್ರೆಸ್‌ ವರಿಷ್ಠರು ಬರುವ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿದ್ದಾರೆ ಎಂದರು.

ಸಿದ್ದರಾಮಯ್ಯ ನಮ್ಮ ನಾಯಕರು. ಮೇಲಾಗಿ ಅವರು ಕಾಂಗ್ರೆಸ್‌ಗೆ ಬಹಳಷ್ಟು ಉಪಕಾರ ಮಾಡಿದ್ದಾರೆ. ಹೀಗಾಗಿ ಅವರ ಭೇಟಿ ಮಾಡಲು ಹಾಗೂ ಆರೋಗ್ಯ ವಿಚಾರಿಸಲು ನಾವು ಮತ್ತು ಕೆಲ ಶಾಸಕರು ಧರ್ಮಸ್ಥಳದ ಬಳಿ ಶಾಂತಿಧಾಮಕ್ಕೆ ಹೋಗಿದ್ದೆವು. ಕಾಂಗ್ರೆಸ್‌ನಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷ ನಿಷ್ಠೆ ಇರಲಿ ಎಂದು ಡಿ.ಕೆ.ಶಿವಕುಮಾರ
ಹೇಳಿರುವುದು ಅವರ ವೈಯಕ್ತಿಕ ವಿಚಾರ. ಪಕ್ಷಕ್ಕೆ ಉಪಕಾರ ಮಾಡಿದವರನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಾವು ಅದನ್ನೇ ಮಾಡಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡರು.

Trending videos

Back to Top