CONNECT WITH US  

ಬಜೆಟ್‌ ಅನ್ಯಾಯ: ಕರಾವಳಿ ಬಿಜೆಪಿ ಶಾಸಕರಿಂದ ಕಪ್ಪುಪಟ್ಟಿ ಪ್ರತಿಭಟನೆ

 ಬೆಂಗಳೂರು: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ಬಜೆಟ್‌ನಲ್ಲಿ ಕರಾವಳಿಗೆ ಯಾವುದೇ ಯೋಜನೆಗಳನ್ನು ನೀಡದಿರುವುದನ್ನು ಖಂಡಿಸಿ ಕರಾವಳಿಯ  ಬಿಜೆಪಿ ಶಾಸಕರು ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. 

ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕರು ಸರ್ಕಾರದ ಧೋರಣೆಯನ್ನು ಖಂಡಿಸಿದರು. 

ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್‌ ಶೆಟ್ಟಿ, ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್‌, ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್‌, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ,ಸುಳ್ಯ ಶಾಸಕ ಅಂಗಾರ, ಉಡುಪಿ ಶಾಸಕ ರಘುಪತಿ ಭಟ್‌, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ , ಭಟ್ಕಳ ಶಾಸಕ ಸುನೀಲ್‌ ನಾಯ್ಕ,ಕುಮಟಾ ಶಾಸಕ ದಿನಕರ ಶೆಟ್ಟಿ, ಕಾರವಾರ ಶಾಸಕಿ ರೂಪಾಲಿ ನಾಯ್ಕ, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್‌ ಪೂಜಾರಿ ಅವರು ಪ್ರತಿಭಟನೆಯಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. 

Trending videos

Back to Top