ಹಂತ ಹಂತವಾಗಿ ಪೊಲೀಸ್ ಹುದ್ದೆ ಭರ್ತಿ
Team Udayavani, Jul 11, 2018, 6:00 AM IST
ವಿಧಾನಪರಿಷತ್ತು: ಪೊಲೀಸ್ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಕೆ.ಪಿ.ನಂಜುಂಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರತಿ ವರ್ಷ 4ರಿಂದ 5 ಸಾವಿರ ಸಿಬ್ಬಂದಿ ನಿವೃತ್ತರಾಗುತ್ತಾರೆ. ಆಯಾ ವರ್ಷದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಆದರೆ, 2008ರಿಂದ 2013ರವರೆಗೆ
ಐದು ವರ್ಷದ ಅವಧಿಯಲ್ಲಿ ಯಾವುದೇ ನೇಮಕಾತಿಗಳು ನಡೆದಿಲ್ಲ. ಹಾಗಾಗಿ, ಸಾಕಷ್ಟು ಬ್ಯಾಕ್ಲಾಗ್ ಹುದ್ದೆಗಳು ಖಾಲಿ ಉಳಿದಿದ್ದವು. ಹಿಂದಿನ ಸರ್ಕಾರದ 5 ವರ್ಷಗಳಲ್ಲಿ 26 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದರು.
2016-17 ಮತ್ತು 2017-18ನೇ ಸಾಲಿನ 12,139 ಹುದ್ದೆಗಳ ಭರ್ತಿಗೆ ಮಂಜೂರಾತಿ ಸಿಕ್ಕಿದೆ. ಆದರೆ, ಈ ಎಲ್ಲ ಹುದ್ದೆಗಳನ್ನು ಏಕಕಾಲಕ್ಕೆ ಭರ್ತಿ ಮಾಡಿಕೊಳ್ಳಲು ಆಗುವುದಿಲ್ಲ. ಏಕೆಂದರೆ ನಮ್ಮಲ್ಲಿರುವುದು 10 ಕಾಯಂ ಮತ್ತು 20 ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಗಳು. ಒಂದೊಂದು ಶಾಲೆಯಲ್ಲಿ ಬಾರಿಗೆ ಗರಿಷ್ಠ 3ರಿಂದ 4 ಸಾವಿರ ಸಿಬ್ಬಂದಿಗೆ ತರಬೇತಿ ಕೊಡಬಹುದು. ತರಬೇತಿ ಶಾಲೆಗಳ ಲಭ್ಯತೆ ಮತ್ತು ಪರಿಸ್ಥಿತಿ ಆಧರಿಸಿ ನೇಮಕಾತಿ ಪ್ರಕ್ರಿಯೆ ನಡೆಸಬೇಕಾಗುತ್ತದೆ. ಅದರಂತೆ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್