ಚುನಾವಣೆ ಸಿದ್ಧತೆ: ಕ್ಷೇತ್ರವಾರು ಸಭೆ
Team Udayavani, Jul 15, 2018, 7:00 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧಿಕಾರ ವಹಿಸಿಕೊಂಡ ತಕ್ಷಣವೇ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕೆಲಸಕ್ಕೆ ಮುಂದಾಗಿದ್ದು, ಲೋಕಸಭಾ ಕ್ಷೇತ್ರವಾರು ಸಭೆ ಆರಂಭಿಸಿದ್ದಾರೆ.
ಶನಿವಾರ ಬೆಂ.ಉತ್ತರ, ದಕ್ಷಿಣ, ಕೇಂದ್ರ, ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಪದಾಧಿಕಾರಿಗಳ ಜತೆ ಸಭೆ ನಡೆಸಿ ಕಾರ್ಯತಂತ್ರಗಳ ಬಗ್ಗೆ ಸಮಾಲೋಚಿಸಿದರು.
ಜು.16ರಂದು ಮಂಡ್ಯ, ಮೈಸೂರು, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು,ಬಳ್ಳಾರಿ, ಕಾರವಾರ ಲೋಕಸಭೆ ಕ್ಷೇತ್ರದ ಪದಾಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು,17ಕ್ಕೆ ತುಮಕೂರು, ಚಿತ್ರದುರ್ಗ, ದಾವಣಗೆರೆ,ಶಿವಮೊಗ್ಗ, ಹಾಸನ ಹಾಗೂ ರಾಮನಗರ, ಜು.18ಕ್ಕೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ದಕ್ಷಿಣ ಕನ್ನಡ ಹಾಗೂ ವಿಜಯಪುರ, ಜು. 19ಕ್ಕೆ ಬೆಳಗಾವಿ,
ಚಿಕ್ಕೋಡಿ, ಗದಗ, ಹಾವೇರಿ, ಹುಬ್ಬಳ್ಳಿ- ಧಾರವಾಡ, ಬಾಗಲ ಕೋಟೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಲಿದ್ದಾರೆ.
21ರಂದು ಕೆಪಿಸಿಸಿ ಪದಾಧಿಕಾರಿಗಳು,ಜಿಲ್ಲಾಧ್ಯಕ್ಷರೊಂದಿಗೆ ಸಭೆ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಪ್ರತ್ಯೇಕ ಸಭೆ ಸಹ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ