CONNECT WITH US  

2 ಪ್ರತ್ಯೇಕ ಭೀಕರ ಅಪಘಾತಗಳು : 5 ಬಲಿ ; ಮೂವರು ಗಂಭೀರ 

ತುಮಕೂರು / ಕೋಲಾರ: ರಾಜ್ಯದಲ್ಲಿ ನಡೆದ 2 ಪ್ರತ್ಯೇಕ ಭೀಕರ ಅಪಘಾತದಲ್ಲಿ ದಂಪತಿ ಸೇರಿ ಐವರು ಬಲಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮುಳಬಾಗಿಲಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸೋಮವಾರ ತಡರಾತ್ರಿ ಟ್ರ್ಯಾಕ್ಟರೊಂದು ವ್ಯಾಗನರ್‌ ಕಾರಿಗೆ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದು, ಹಿಂದಿನ ಸೀಟಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮೃತರು ಶಿವು(24)ಮತ್ತು ಕಿರಣ್‌ (23) ಎಂದು ತಿಳಿದು ಬಂದಿದೆ. ಘಟನೆಯ ಬಳಿಕ ಟ್ರ್ಯಾಕ್ಟರ್‌ ಚಾಲಕ ಪರಾರಿಯಾಗಿದ್ದಾನೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತುಮಕೂರಿನ ಶಿರಾದ ದೊಡ್ಡ ಆಲದ ಮರದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ  ಮಂಗಳವಾರ ಬೆಳ್ಳಂಬೆಳಗ್ಗೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ಕ್ಯಾಂಟರ್‌ನಲ್ಲಿದ್ದ ದಂಪತಿ ಮತ್ತು ಚಾಲಕ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಮೃತರು ಹನುಮಂತರಾಜು (42) ಪತ್ನಿ ರಾಧಾ(35)ಮತ್ತು ಚಾಲಕ ಲೋಕೇಶ್‌ ಎಂದು ತಿಳಿದು ಬಂದಿದೆ. 

ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Trending videos

Back to Top