ರಾ.ಹೆ.ಕಾಮಗಾರಿ ಪೂರ್ಣಗೊಳಿಸಲು ಕ್ರಮ: ನಿತಿನ್‌ ಗಡ್ಕರಿ


Team Udayavani, Jul 18, 2018, 6:00 AM IST

26.jpg

ಬೆಂಗಳೂರು: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿ ತಮ್ಮನ್ನು ಭೇಟಿಯಾದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರೊಂದಿಗೆ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು, ರಸ್ತೆ ಕಾಮಗಾರಿಗಳು ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. 

ಕಳೆದ ಜೂ.18ರಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮನ್ನು ಭೇಟಿಯಾಗಿದ್ದ ವೇಳೆ, ರಾಜ್ಯದಲ್ಲಿನ ವಿವಿಧ ಹೆದ್ದಾರಿ ಕಾಮಗಾರಿಗಳಿಗೆ ಅಡಚಣೆ ಉಂಟಾಗಿರುವ ಬಗ್ಗೆ ಪ್ರಸ್ತಾಪಿಸಿದ್ದ ನಿತಿನ್‌ ಗಡ್ಕರಿ, ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಸಮಸ್ಯೆ ಬಗೆಹರಿಸುವಂತೆ ಕೋರಿದ್ದರು. ಅದರಂತೆ ಮಂಗಳವಾರ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಕೈಗೊಂಡ ಕ್ರಮ
ಗಳನ್ನು ವಿವರಿಸಿದರು.

ಚನ್ನರಾಯಪಟ್ಟಣದಿಂದ ಹೊಳೇನರಸೀಪುರ -ಅರಕಲಗೂಡು-ಕೊಡ್ಲಿಪೇಟೆ ಮಾರ್ಗವಾಗಿ ಮಡಿಕೇರಿ ಸೇರುವ ರಸ್ತೆ, ಬಿಳಿಕೆರೆ-ಕೆ.ಆರ್‌. ನಗರ- ಹೊಳೆನರಸೀಪುರ- ಹಾಸನ ಮಾರ್ಗವಾಗಿ ಸಾಗುವ ಬೇಲೂರು ರಸ್ತೆ ಸೇರಿ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ
ರಸ್ತೆಗಳ ಪ್ರಗತಿ ಕುರಿತಂತೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ
ಮನವಿ ಮಾಡಿದರು.

ಅಲ್ಲದೆ, ಕೇಂದ್ರ ರಸ್ತೆ ನಿಧಿಯ (ಸಿಆರ್‌ಎಫ್) ಅನುದಾನದಿಂದ ರಾಜ್ಯದಲ್ಲಿ ಹಲವಾರು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ. ಆದ್ದರಿಂದ ಕೇಂದ್ರದಿಂದ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಕೋರಿದಾಗ,
ಕಾಮಗಾರಿ ಪೂರ್ಣಗೊಂಡಿರುವುದನ್ನು ಪುಷ್ಟೀಕರಿಸುವ ಬಳಕೆ ಪ್ರಮಾಣಪತ್ರ ಸಲ್ಲಿಸಿದ ತಕ್ಷಣವೇ ಅನುದಾನ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.

ಎನ್‌ಎಚ್‌ 212ರ ಅರಣ್ಯದಲ್ಲಿ ಮೇಲ್ಸೇತುವೆ ನಿರ್ಮಾಣ?
ಕರ್ನಾಟಕ ಮತ್ತು ಕೇರಳವನ್ನು ಬೆಸೆಯುವ ರಾಷ್ಟ್ರೀಯ ಹೆದ್ದಾರಿ 212 ಮಾರ್ಗವು ವನ್ಯಜೀವಿ ಪ್ರದೇಶದಲ್ಲಿ ಹಾದುಹೋಗಿರುವುದರಿಂದ ರಸ್ತೆ ನಿರ್ಮಾಣ ವಿವಾದ ಸುಪ್ರೀಂಕೋರ್ಟ್‌ನಲ್ಲಿದೆ. ಈ ಮಾರ್ಗ ಮೈಸೂರು ಮೂಲಕ ಕೇರಳದ ಕೋಯಿಕ್ಕೋಡ್‌ ಸಂಪರ್ಕಿಸುತ್ತಿದ್ದು, ಮಾರ್ಗಮಧ್ಯೆ ಬಂಡೀಪುರ ರಾಷ್ಟ್ರೀಯ ಉದ್ಯಾನ ಬರುತ್ತದೆ. ಹೀಗಾಗಿ ಸುಮಾರು 5 ಕಿ.ಮೀ. ಮಾರ್ಗವನ್ನು ಮೇಲ್ಸೆತುವೆ ಹೆದ್ದಾರಿಯನ್ನಾಗಿಸಿ ಕೆಳಭಾಗದಲ್ಲಿ ಪ್ರಾಣಿಗಳಿಗೆ ಅಡಚಣೆ ಇಲ್ಲದಂತೆ ವಾಹನ ಸಂಚರಿಸಲು ಅನುಮಾಡಿಕೊಡಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ. ಆದ್ದರಿಂದ ಎರಡೂ ರಾಜ್ಯಗಳು ಈ ಬಗ್ಗೆ ಚರ್ಚಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ವಿವಾದ ಇತ್ಯರ್ಥಪಡಿಸಿದರೆ ಮೇಲ್ಸೇತುವೆ ಮಾರ್ಗ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಈ ಸಲಹೆಯನ್ನು ಸ್ವಾಗತಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಂಬಂಧಿಸಿದವರಿಗೆ ಈ ಕುರಿತು ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.