ಕಾವೇರಿ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರಿ


Team Udayavani, Jul 19, 2018, 6:00 AM IST

180718kpn71.jpg

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಪಕ್ಷ ಭೇದ ಮರೆತು ಕೇಂದ್ರದ ಗಮನ ಸೆಳೆಯುವ ಮೂಲಕ ರಾಜ್ಯಕ್ಕೆ ನ್ಯಾಯ ಒದಗಿಸಲು ಪ್ರಯತ್ನ ಮಾಡುವ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯದ ಸಂಸದರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಮಾಹಿತಿ ಹಂಚಿಕೊಳ್ಳಲು ದೆಹಲಿಯಲ್ಲಿ ಬುಧವಾರ ರಾತ್ರಿ ಕುಮಾರಸ್ವಾಮಿ ಸಭೆ ಕರೆದಿದ್ದು, ಈ ವೇಳೆ ಕಾವೇರಿ ಸೇರಿ ರಾಜ್ಯದ ಹಿತದೃಷ್ಟಿಯಿಂದಕೇಂದ್ರದಿಂದ ಹೆಚ್ಚು ಅನುದಾನ ತರುವ ಬಗ್ಗೆ ಎಲ್ಲರೂ  ಒಗ್ಗಟ್ಟಾಗಿ ಸಂಸತ್‌ ಅಧಿವೇಶನದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರಲು ತೀರ್ಮಾನಿಸಲಾಯಿತು.

ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ವಿಚಾರದಲ್ಲಿ ರಾಜ್ಯಕ್ಕೆ ಕ್ಲಿಷ್ಟ ಪರಿಸ್ಥಿತಿ ಒದಗಿದೆ. ಈ ಬಗ್ಗೆ ಎಲ್ಲರೂ ಒಗ್ಗೂಡಿ ಪಕ್ಷ$ಭೇದ ಮರೆತು ಒಗ್ಗಟ್ಟಿನ ಮೂಲಕ ಸಂಸತ್ತಿನಲ್ಲಿ ನಮ್ಮ ಬಲ ತೋರಿಸಬೇಕು ಎಂದು ಮನವಿ ಮಾಡಿದರು. ರಾಜ್ಯದ ನೆಲ-ಜಲ,ಸಂಪನ್ಮೂಲಗಳ ರಕ್ಷಣೆಯ ವಿಚಾರದಲ್ಲಿ ರಾಜ್ಯದ ಸಂಸದರು ಪಕ್ಷ$ಭೇದ ಮರೆತು ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕೈಜೋಡಿಸಿದ್ದನ್ನು ಸ್ಮರಿಸಿದ ಅವರು, ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿಚಾರದಲ್ಲಿ ಮತ್ತೂಮ್ಮೆ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ.

ಆದ್ದರಿಂದ ನಮ್ಮ ಹಕ್ಕಿನ ನೀರನ್ನು ನ್ಯಾಯಯುತವಾಗಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಧ್ವನಿ ಎತ್ತುವಂತೆ ಸಂಸದರಲ್ಲಿ ಕೋರಿದರು.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮೈತ್ರಿ ಸರ್ಕಾರ ತನ್ನ ಚೊಚ್ಚಲ ಬಜೆಟ್‌ಗೆ ಅನುಮೋದನೆ ಪಡೆದು ಕೊಂಡಿದ್ದು, ಹಿಂದಿನ ಜನಪರ ಯೋಜನೆಗಳನ್ನು ಮುಂದುವರಿಸುವುದರ ಜತೆಗೆ, ಮತ್ತಷ್ಟು ಜನಪರ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶ
ಹೊಂದಿದೆ. ಅವುಗಳ ಅನುಷ್ಠಾನಕ್ಕೆ ಕೇಂದ್ರದ ನೆರವೂ ಬೇಕಾಗಿದ್ದು, ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ರಾಜ್ಯದ ಪ್ರಸ್ತಾವನೆಗಳನ್ನು ಶೀಘ್ರ ವಿಲೇವಾರಿ ಮಾಡಬೇಕಾಗುತ್ತದೆ. ಆದ್ದರಿಂದ ಕೇಂದ್ರದಲ್ಲಿ ಬಾಕಿ ಉಳಿದಿರುವ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆಯುವಂತೆ ಕೋರಿದರು.

ಮಾಜಿ ಪ್ರಧಾನಿ ಎಚ್‌ಡಿ.ದೇವೇಗೌಡ, ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾ ರ್ಜುನ ಖರ್ಗೆ, ಕೇಂದ್ರ ಸಚಿವರಾದ ಅನಂತ ಕುಮಾರ್‌, ಸದಾನಂದಗೌಡ, ಅನಂತಕುಮಾರ್‌ ಹೆಗಡೆ, ರಮೇಶ್‌ ಜಿಗಜಿಣಗಿ ಸೇರಿ ರಾಜ್ಯದ ಲೋಕಸಭೆ, ರಾಜ್ಯಸಭೆ ಸದಸ್ಯರು, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ಕೋರ್ಟ್‌ ಆದೇಶದಂತೆ ಕೇಂದ್ರ ಸರ್ಕಾರ ರೂಪಿಸಿರುವ ಕಾವೇರಿ ಸ್ಕೀಂ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ಜತೆಗೆ ಸಂಸತ್‌ನಲ್ಲೂ ಈ ವಿಚಾರ ಪ್ರಸ್ತಾಪಿಸಲು ಸಂಸದರಲ್ಲಿ ಕೋರಲಾಗಿದೆ.|
– ಡಿ.ಕೆ.ಶಿವಕುಮಾರ್‌,
ಜಲ ಸಂಪನ್ಮೂಲ ಸಚಿವ

ಸಂಸತ್‌ನಲ್ಲಿ ಕಾವೇರಿ ವಿಚಾರವನ್ನು ಯಾವ ರೀತಿ ಪ್ರಸ್ತಾಪಿಸ ಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಪಕ್ಷ ಬೇಧ ಮರೆತು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ.
– ಎಚ್‌.ಡಿ.ದೇವೇಗೌಡ,
ಮಾಜಿ ಪ್ರಧಾನಿ

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.