CONNECT WITH US  

ರಮೇಶ್‌ ಜಾರಕಿಹೊಳಿ ಅಜ್ಮೀರ್ ಪ್ರವಾಸಕ್ಕೆ ಕೈನಲ್ಲಿ ಅಸಮಾಧಾನ

ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಅವರು ಅಜ್ಮೀರ್ ದರ್ಗಾಕ್ಕೆ ಚಾದರ್‌ ಅರ್ಪಿಸಿ ಹರಕೆ ತೀರಿಸಿದರು.

ಬೆಂಗಳೂರು: ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್‌ ಶಾಸಕರು ರಾಜಸ್ಥಾನದ ಅಜ್ಮೀರ್ ಪ್ರವಾಸ
ಕೈಗೊಂಡಿರುವುದು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ರಮೇಶ್‌ ಜಾರಕಿಹೊಳಿ ಕ್ರಮವನ್ನು ಈಗಾಗಲೇ ಪಕ್ಷದ ನಾಯಕರು ಹೈಕಮಾಂಡ್‌ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆ
ಯಲ್ಲಿ ಅಜ್ಮೀರ್ ಪ್ರವಾಸದ ಕುರಿತು ವಿವರಣೆ ನೀಡುವಂತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಸಚಿವ
ರಮೇಶ್‌ ಜಾರಕಿಹೊಳಿಯಿಂದ ವಿವರಣೆ ಕೇಳಿದ್ದಾರೆಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕ ಭಾಗದ ಶಾಸಕರು ಹಾಗೂ ರಾಯಚೂರು ಸಂಸದ ಬಿ.ವಿ.ನಾಯಕ್‌ ಸೇರಿ ಹತ್ತಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಅಜ್ಮೀರ್‌ ಪ್ರವಾಸ ಕೈಗೊಂಡಿದ್ದು, ಸಚಿವರು ಶಕ್ತಿ ಪ್ರದರ್ಶನ ಮಾಡಲು ಈ ಪ್ರವಾಸ
ಕೈಗೊಂಡಿದ್ದಾರೆಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿ ಕೇಳಿ ಬಂದಿವೆ.

ರಮೇಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ಕೊಡುವ ಬದಲು ಅವರ ಸಹೋದರ ಸತೀಶ್‌ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕಿತ್ತು ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಮೇಶ್‌ ಜಾರಕಿಹೊಳಿ ತಮ್ಮೊಂದಿಗೂ ಶಾಸಕರಿದ್ದಾರೆ ಎನ್ನುವುದನ್ನು ತೋರಿಸಲು ಈ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಶಾಸಕರು ಹರಕೆ ತೀರಿಸಲು ಎಲ್ಲರೂ ಒಟ್ಟಾಗಿ ಪ್ರವಾಸ ಕೈಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಈ ಮಧ್ಯೆ,
ಹೈಕಮಾಂಡ್‌ ಅಸಮಾಧಾನಗೊಂಡ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಶಾಸಕರ ತಂಡ ದೆಹಲಿಗೆ ತೆರಳಿ, ಹೈಕಮಾಂಡ್‌
ಭೇಟಿ ಮಾಡಿ ಪ್ರವಾಸದ ಬಗ್ಗೆ ವಿವರಣೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರು ಹರಕೆ ಹೊತ್ತು ಕೊಂಡಿದ್ದಾರೆ. ಹೀಗಾಗಿ ಪೂಜೆ ಮಾಡಿಸಲು ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈ ಕುರಿತು ವರದಿ ಕೇಳಿರುವ ಬಗ್ಗೆ ನನಗೆ ಮಾಹಿತಿ ಇಲ್ಲ.
- ಡಾ.ಜಿ. ಪರಮೇಶ್ವರ್‌,
ಉಪ ಮುಖ್ಯಮಂತ್ರಿ

Trending videos

Back to Top