CONNECT WITH US  

77ನೇ ಹುಟ್ಟುಹಬ್ಬ ಆಚರಿಸಿಕೊಂಡ ಖರ್ಗೆ

ಬೆಂಗಳೂರು: ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 77ನೇ ಜನ್ಮ ದಿನಾಚರಣೆಯನ್ನು ಪತ್ನಿ, ಮೊಮ್ಮಕ್ಕಳು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಅಭಿಮಾನಿಗಳು ಅಭಿಮಾನದಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದಾರೆ.

ರಾಜಕೀಯವನ್ನು ಲಾಭದ ಹುದ್ದೆ ಎಂದು ನಾನು ನಂಬಿಲ್ಲ. ಅವಕಾಶ ಸಿಕ್ಕಾಗ ಜನರ ಸೇವೆ ಮಾಡಬೇಕು. ನಾನು ಅದನ್ನೇ ಮಾಡಿಕೊಂಡು ಬಂದಿದ್ದೇನೆ.ರಾಜ್ಯದ ಅಭಿವೃದ್ಧಿಗೆ ನನ್ನ ಕೈಲಾದ ಕೆಲಸ ಮಾಡಿದ್ದೇನೆ. ಯಾವುದೇ ಸಂದರ್ಭದಲ್ಲೂ ನಂಬಿದ ತತ್ವ ಸಿದ್ಧಾಂತಗಳ ವಿರುದ್ಧ ರಾಜಕೀಯ ಮಾಡಿಲ್ಲ ಎಂದು ಹೇಳಿದರು.


Trending videos

Back to Top