CONNECT WITH US  

ಸರ್ಕಾರದ ವಿರುದ್ಧ ಶೀಘ್ರದಲ್ಲೇ ಹೋರಾಟ: ಬಿಎಸ್‌ವೈ

ತೀರ್ಥಹಳ್ಳಿ: ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಚುನಾವಣೆಗೂ ಮೊದಲು ಮತದಾರರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. 

ನಗರದಲ್ಲಿ ಮಾತನಾಡಿ, ಚುನಾವಣೆಗೂ ಮೊದಲು ರೈತರ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್‌ಗಳ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಈಗ ಸಮ್ಮಿಶ್ರ ಸರ್ಕಾರದ ನೆಪವೊಡ್ಡಿ ಸಾಲಮನ್ನಾ ಮಾಡದೆ ರೈತರನ್ನು ವಂಚಿಸುತ್ತಿದ್ದಾರೆ. ಇದಕ್ಕೂ ಮೊದಲು ಆಡಳಿತ ನಡೆಸಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಭಾರೀ ಯೋಜನೆಗಳ ಶಂಕುಸ್ಥಾಪನೆ ಮಾಡುವುದನ್ನೇ ದೊಡ್ಡ ಸಾಧನೆ ಎಂದುಕೊಂಡಿತ್ತು. ಶಂಕುಸ್ಥಾಪನೆಗೊಂಡ ಯಾವ ಯೋಜನೆಗಳಿಗೂ ಇದುವರೆಗೂ ಹಣ ಬಿಡುಗಡೆಯಾಗದೇ ನನೆಗುದಿಗೆ ಬಿದ್ದಿದೆ. ಅಲ್ಲದೇ, ಸಂಧ್ಯಾಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನವನ್ನು ನೀಡಲು ಸಹ ಹಣವಿಲ್ಲದಷ್ಟು ಖಜಾನೆ ದಿವಾಳಿಯಾಗಿದೆ. ಈ ಎಲ್ಲ ಸಮಸ್ಯೆಗಳ ವಿರುದ್ಧ ಶೀಘ್ರದಲ್ಲಿಯೇ ಹೋರಾಟ ರೂಪಿಸಲಾಗುವುದು ಎಂದು ಘೋಷಿಸಿದರು.


Trending videos

Back to Top