ಭೀಕರ ಅಪಘಾತ: ಕಾರು ನಜ್ಜು ಗುಜ್ಜು;ವಿದ್ಯಾರ್ಥಿಗಳಿಬ್ಬರ ದುರ್ಮರಣ
Team Udayavani, Jul 25, 2018, 10:02 AM IST
ಬೆಂಗಳೂರು /ಮಂಗಳೂರು: ತುಮಕೂರು ರಸ್ತೆಯ ನೆಲಮಂಗಲದ ತಾವರೆಕೆರೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಾಲಯಣ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣ ಅವರ ಪುತ್ರ ಸೇರಿದಂತೆ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರು ಶ್ರೀನಿಧಿ ಅಸ್ರಣ್ಣ(21) ಮತ್ತು ಪ್ರಜ್ವಲ್(20)ಎನ್ನುವವರಾಗಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಇವರು ಇನ್ನಿಬ್ಬರು ಸ್ನೇಹಿತರೊಂದಿಗೆ ಪ್ರಾಜೆಕ್ಟ್ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ.
ಮೃತ ಶ್ರೀನಿಧಿ ಅಸ್ರಣ್ಣ
ಪ್ರಜ್ವಲ್ ತಮ್ಮನನ್ನು ತುಮಕೂರಿಗೆ ಬಿಟ್ಟು ವಾಪಾಸಾಗುತ್ತಿದ್ದ ವೇಳೆ ಅವಘಡ ನಡೆದಿದೆ.ನಾಲ್ವರಿದ್ದ ಕಾರು ಲಾರಿಯೊಂದಕ್ಕೆ ಢಿಕ್ಕಿಯಾಗಿ ಬಳಿಕ ಸರಕಾರಿ ಬಸ್ಗೆ ಢಿಕ್ಕಿಯಾಗಿ ಸಂಪೂರ್ಣ ನಜ್ಜುಗುಜ್ಜಾ ಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿನಲ್ಲಿದ್ದ ಶರತ್ ಭಂಡಾರಿ ಮತ್ತು ಶರತ್ ಉಡುಪ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಕಟೀಲಿನಲ್ಲಿ ವಿಚಾರ ತಿಳಿದು ನೀರವ ಮೌನ ಆವರಿಸಿದ್ದು, ಹಲವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು