ಚಾಮರಾಜೇಶ್ವರ ರಥೋತ್ಸವಕ್ಕೆ ಈ ಬಾರಿಯೂ ವಿಘ್ನ

Team Udayavani, Jul 26, 2018, 6:45 AM IST

ban26071807medn.jpg

ಚಾಮರಾಜನಗರ: ಪ್ರತಿ ವರ್ಷ ಆಷಾಢದ ಪೂರ್ವಾಷಾಢ ನಕ್ಷತ್ರದ ದಿನ ನಗರದ ಐತಿಹಾಸಿಕ ಚಾಮರಾಜೇಶ್ವರ ರಥೋತ್ಸವ ನಡೆಯುತ್ತಿತ್ತು. ಅದರಂತೆ ಗುರುವಾರ ಈ ಬಾರಿಯ ರಥೋತ್ಸವ ನಡೆಯಬೇಕಿತ್ತು.ನೂತನ ರಥ ನಿರ್ಮಾಣವಾಗದ ಕಾರಣ ಸತತ ಎರಡನೇ ವರ್ಷ ರಥೋತ್ಸವ ನಡೆಯುತ್ತಿಲ್ಲ. ಇದು ಭಕ್ತಾದಿಗಳಿಗೆ ಹಾಗೂ ನವದಂಪತಿಗಳಿಗೆ ನಿರಾಸೆ ಮೂಡಿಸಿದೆ.

2017ರ ಫೆ. 19ರ ನಡುರಾತ್ರಿ ಸಮಯದಲ್ಲಿ ಕಿಡಿಗೇಡಿಯೊಬ್ಬ ನಗರದ ಚಾಮರಾಜೇಶ್ವರ ರಥಕ್ಕೆ ಬೆಂಕಿ ಹಚ್ಚಿ ರಥ ಭಾಗಶಃ ಸುಟ್ಟುಹೋಗಿತ್ತು. 

ನಿರ್ಲಕ್ಷ್ಯ: ಸುಟ್ಟು ಹೋದ ರಥ ಬಳಸುವುದು ಶಾಸ್ತ್ರ  ಸಮ್ಮತವಲ್ಲ ಎಂದು ಅರ್ಚಕ ವೃಂದ ತಿಳಿಸಿತು. ಮೊದಲೇ ರಥ ಶಿಥಿಲವಾಗಿತ್ತು. ರಥವಿಲ್ಲದ ಕಾರಣ 2017ರ ಆಷಾಢ ರಥೋತ್ಸವ ನಡೆಯಲಿಲ್ಲ. ಆ ವೇಳೆ ಮುಂದಿನ ವರ್ಷವಾದರೂ ಹೊಸ ರಥ ನಿರ್ಮಾಣವಾಗುವುದೆಂದು ಜನ ನಿರೀಕ್ಷಿಸಿದ್ದರು. ಆದರೆ, ಜನತೆಯ ನಿರೀಕ್ಷೆ ಹುಸಿಯಾಗಿದೆ.

ಸಂಪ್ರೋಕ್ಷಣೆ ನೆಪ: ಇದಕ್ಕೆ ದೇವಾಲಯದ ಆಡಳಿತ ವರ್ಗ ಕೊಡುವ ಕಾರಣವೇ ಬೇರೆ. ಪ್ರಸ್ತುತ ಚಾಮರಾಜೇಶ್ವರ ದೇವಸ್ಥಾನದ ನವೀಕರಣ ನಡೆಯುತ್ತಿದ್ದು, ದೇಗುಲ ಸಂಪ್ರೋಕ್ಷಣೆಯಾಗದೇ ರಥೋತ್ಸವ ನಡೆಸುವಂತಿಲ್ಲ. ಸಂಪ್ರೋಕ್ಷಣೆಯಾಗಿದ್ದರೆ ಚಿಕ್ಕರಥವನ್ನಾದರೂ ಬಳಸಿಕೊಂಡು ರಥೋತ್ಸವ ನಡೆಸಬಹುದಿತ್ತು ಎನ್ನುತ್ತಾರೆ. ಆದರೆ, ಸಂಪ್ರೋಕ್ಷಣೆ ನಡೆಯದಿದ್ದರೂ ದೇವಾಲಯದಲ್ಲಿ ದೈನಿಕ ಪೂಜಾ ವಿಧಿ ವಿಧಾನಗಳು ಅದೇ ಗುಡಿಯೊಳಗೆ ನಡೆಯು ತ್ತಲೇ ಇವೆ. ಹಾಗಾಗಿ ರಥೋತ್ಸವ ಮಾಡದಿರಲು ಇದು ಕಾರಣವಲ್ಲ ಎನ್ನುತ್ತಾರೆ ಭಕ್ತಾದಿಗಳು.

ಕರೆಯದ ಮರುಟೆಂಡರ್‌: ಕಳೆದ ವರ್ಷವೇ ನೂತನ ರಥ ನಿರ್ಮಾಣಕ್ಕೆ 1.20 ಕೋಟಿ ರೂ.ಗಳ ಅನುದಾನವನ್ನು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನೀಡಿತ್ತು. ಜಿಲ್ಲಾಡಳಿತ ಈ ಅನುದಾನವನ್ನು ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿತ್ತು. ಲೋಕೋಪಯೋಗಿ ಇಲಾಖೆ ನೂತನ ರಥ ನಿರ್ಮಿಸಲು ಟೆಂಡರ್‌ ಕರೆದಿತ್ತು.ಆದರೆ ಕಾರಣಾಂತರಗಳಿಂದ ಟೆಂಡರ್‌ ರದ್ದಾಗಿತ್ತು. 

ನವ ದಂಪತಿಗಳಿಗೆ ನಿರಾಸೆ: ಚಾಮರಾಜನಗರದ ಚಾಮರಾಜೇಶ್ವರ ರಥೋತ್ಸವ ನವ ದಂಪತಿಗಳ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಆಷಾಢ ಮಾಸದ ಪೂರ್ವಾಷಾಢದಲ್ಲಿ ನಡೆಯುವ ಈ ಜಾತ್ರೆಗೆ ಮದುವೆಯಾದ ಬಳಿಕ ಆಷಾಢದಲ್ಲಿ ತವರನ್ನು ಸೇರಿರುವ ಪತ್ನಿಯನ್ನು ನೋಡಲು ಪತಿಗೆ ಇದು ಅವಕಾಶ. ಜತೆಗೆ ನವದಂಪತಿಗಳು ಈ ಜಾತ್ರೆಗೆ ಆಗಮಿಸಿ,ರಥಕ್ಕೆ ಹಣ್ಣು ಜವನ ಎಸೆದು ಇಷ್ಟಾರ್ಥ ಪ್ರಾರ್ಥಿಸುವುದು ಪ್ರತೀತಿ. ಆದರೆ, ರಥೋತ್ಸವ ರದ್ದಾಗಿರುವುದು ನವದಂಪತಿಗಳಿಗೆ ನಿರಾಸೆ ಮೂಡಿಸಿದೆ.

ದೇವಾಲಯದ ಜೀರ್ಣೋದಾಟಛಿರ ಕಾಮಗಾರಿಪ್ರಗತಿಯಲ್ಲಿದೆ. ದೇವಾಲಯಕ್ಕೆ  ಸಂಪ್ರೋಕ್ಷಣೆ ನಡೆಯಬೇಕಾಗಿದೆ. ಹಾಗಾಗಿ ರಥೋತ್ಸವ ನಡೆಯುತ್ತಿಲ್ಲ. ನೂತನ ರಥ ನಿರ್ಮಾಣಕ್ಕೆ ಇನ್ನೊಂದು ವಾರದಲ್ಲಿ ಮತ್ತೆ ಟೆಂಡರ್‌ ಕರೆಯಲಾಗುತ್ತದೆ.
– ಮಂಜೇಶ್‌,
ಕಾರ್ಯನಿರ್ವಾಹಕ ಅಧಿಕಾರಿ, ಚಾಮರಾಜೇಶ್ವರ
ದೇವಾಲಯ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.