ಗೌರಿ ಹತ್ಯೆ: ಸುರೇಶ್ ಎಸ್ಐಟಿ ವಶಕ್ಕೆ
Team Udayavani, Aug 1, 2018, 6:00 AM IST
ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕುಣಿಗಲ್ ಮೂಲದ ಸುರೇಶ್ನನ್ನು 8 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್ಐಟಿ)ದ ವಶಕ್ಕೆ ನೀಡಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸುರೇಶ್ ಪ್ರಮುಖ ಪಾತ್ರವಹಿಸಿದ್ದು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆಯುವಂತೆ ಎಸ್ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕ ಶ್ರೀಶೈಲ ವಡವಡಗಿ ಕೋರ್ಟ್ಗೆ ಮನವಿ ಮಾಡಿದ್ದರು. ಈ ಸಂಬಂಧ ಸೋಮವಾರವೇ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾ.ವಿ.ಪ್ರಕಾಶ್ ತೀರ್ಪನ್ನು ಮಂಗಳವಾರ ಪ್ರಕಟಿಸಿದರು. ಇದಕ್ಕೆ ಆಕ್ಷೇಪಿಸಿದ ಸುರೇಶ್ ಪರ ವಕೀಲ ಅಮೃತೇಶ್,
ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆಂದು ವಾದಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಸರ್ಕಾರಿ ಅಭಿಯೋಜಕರು, ಆರೋಪಿ ಮೇಲೆ ತನಿಖಾಧಿಕಾರಿಗಳು ಹಲ್ಲೆ ನಡೆಸಿಲ್ಲ ಎಂಬುದಕ್ಕೆ ವೈದ್ಯರೇ ವರದಿ ನೀಡಿದ್ದಾರೆ. ವಶಕ್ಕೆ ಪಡೆದ ನಂತರವೂ ಹಲ್ಲೆ ನಡೆಸುವುದಿಲ್ಲ. ಅಲ್ಲದೆ, ಪ್ರಕರಣದಲ್ಲಿ ಆರೋಪಿ ಪಾತ್ರ ಮುಖ್ಯವಾಗಿದ್ದು, ಆರೋಪಿಗಳು ಕೃತ್ಯವೆಸಗುವ ಸಂದರ್ಭದಲ್ಲಿ ಬಳಸಿದ್ದ ಬಟ್ಟೆ, ಹೆಲ್ಮೆಟ್ ಹಾಗೂ ಇತರೆ ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಅಲ್ಲದೆ, ಈತ ಕೃತ್ಯಕ್ಕೂ ಮೊದಲು ಸಭೆ
ನಡೆಸಿರುವ ಸ್ಥಳಗಳಾದ ಮಂಗಳೂರು, ವಿಜಯಪುರ, ಹುಬ್ಬಳ್ಳಿ ಹಾಗೂ ಸಾಕ್ಷ್ಯನಾಶ ಪಡಿಸಿದ ಸ್ಥಳಗಳಿಗೆ ಕರೆದೊಯ್ದು ಮಹಜರ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ನೀಡಬೇಕೆಂದು ಮನವಿ ಮಾಡಿದ್ದರು. ಹತ್ಯೆ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಲ್ಲದೆ, ಸಾಕ್ಷ್ಯನಾಶ ಪಡಿಸಿದ ಆರೋಪದ ಮೇಲೆ ಜು.25ರಂದು ಸುರೇಶ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ