ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಇಂದು ಆಯೋಗಕ್ಕೆ ಸಲ್ಲಿಕೆ
Team Udayavani, Aug 2, 2018, 6:45 AM IST
ಬೆಂಗಳೂರು: ರಾಜ್ಯದ 215ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಸಿದ್ಧಗೊಂಡಿದ್ದು, ಗುರುವಾರ (ಆ.2) ಗೆಜೆಟ್ ಅಧಿಸೂಚನೆ ಹೊರಡಿಸಿ ಸಂಪೂರ್ಣ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ಗೆ ಹೇಳಿದೆ.
ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಆರ್.ದೇವದಾಸ್ ಅವರಿದ್ದ ವಿಭಾಗೀಯಪೀಠ ಬುಧವಾರ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ಉದಯ್ ಹೊಳ್ಳ, ಇನ್ನು ಏಳು ಸ್ಥಳೀಯ ಸಂಸ್ಥೆಗಳ ಮೀಸ ಲು ನಿಗದಿ ಮಾತ್ರ ಬಾಕಿ ಉಳಿದಿದೆ. ಬುಧವಾರ ಸಂಜೆ ವೇಳೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿ, ಆ.2ರಂದು ಪಟ್ಟಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು. ಹೇಳಿಕೆ ದಾಖಲಿಸಿಕೊಂಡು ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ