ಉತ್ತರ ಕರ್ನಾಟಕ ಬಂದ್‌ ನೀರಸ

Team Udayavani, Aug 3, 2018, 6:00 AM IST

180802kpn51.jpg

ಹುಬ್ಬಳ್ಳಿ/ಕಲಬುರಗಿ: ಉತ್ತರ ಕರ್ನಾಟಕದ 13 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯ ರಚನೆ ಮಾಡುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಗುರುವಾರ ಕರೆ ನೀಡಿದ್ದ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕೆಲವೆಡೆ ಪ್ರತಿಭಟನೆ ನಡೆದದ್ದು ಬಿಟ್ಟರೆ, ಉಳಿದಂತೆ ಜನಜೀವನ ಎಂದಿನಂತಿತ್ತು. ಶಾಲಾ-ಕಾಲೇಜುಗಳು, ವ್ಯಾಪಾರ ವಹಿವಾಟು, ವಾಹನ ಸಂಚಾರ ಎಂದಿನಂತಿತ್ತು. ಮುನ್ನೆಚ್ಚರಿಕೆಯಾಗಿ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು. 

ಈ ಮಧ್ಯೆ, ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಬಂದ್‌ ವಿರೋಧಿಸಿ ಪ್ರತಿಭಟನೆಗಳು ನಡೆದವು. ಅಲ್ಲದೆ, ಯಲಬುರ್ಗಾದಲ್ಲಿ ಹೈದ್ರಾಬಾದ್‌ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕರ್ನಾಟಕ ಜನಕಲ್ಯಾಣ ವೇದಿಕೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ಬೆಳಗಾವಿಯಲ್ಲಿ ಉ.ಕ.ಹೋರಾಟ ಸಮಿತಿಯ ಭೀಮಪ್ಪ ಗಡಾದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ, ಬೆಳಗಾವಿ, ಬಳ್ಳಾರಿ ಸೇರಿದಂತೆ ಹಲವೆಡೆ ಜನರಿಗೆ ಗುಲಾಬಿ ಹೂ ಕೊಟ್ಟು ಬಂದ್‌ಗೆ ಬೆಂಬಲ ಸೂಚಿಸದಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಮಾಡಿದರು. 

ಹಾವೇರಿ, ಧಾರವಾಡಗಳಲ್ಲಿ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವಂತೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಮಧ್ಯೆ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ವಿಚಾರದಲ್ಲಿ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಹಾವೇರಿಯಲ್ಲಿ ಪ್ರತಿಭಟನೆ ಸಂದರ್ಭದಲ್ಲಿಯೇ ಉಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷರನ್ನು ಬದಲಾಯಿಸಿದ ಘಟನೆ ಕೂಡ ನಡೆಯಿತು.

ಇದೇ ವೇಳೆ, ರಾಯಚೂರು, ಯಾದಗಿರಿ, ವಡಗೇರಾ ಸೇರಿದಂತೆ ಹೈ-ಕ ಭಾಗದ ಹಲವೆಡೆ ಬಂದ್‌ ವಿರೋಧಿಸಿ ಪ್ರತಿಭಟನೆಗಳು ನಡೆದವು. ಯಲಬುರ್ಗಾದಲ್ಲಿ ಹೈ-ಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕರ್ನಾಟಕ ಜನಕಲ್ಯಾಣ ವೇದಿಕೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.