ಜೆಡಿಎಸ್ ಜತೆ ಮೈತ್ರಿ ಖಚಿತ: ಈಶ್ವರ ಖಂಡ್ರೆ
Team Udayavani, Aug 6, 2018, 6:25 AM IST
ಬೀದರ: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಹಾಗೂ ಜೆಡಿಎಸ್ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಎರಡೂ ಪಕ್ಷಗಳು ನಿರ್ಧರಿಸಿವೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಥಳೀಯವಾಗಿ ಹೊಂದಾಣಿಕೆ ಸಾಧ್ಯತೆ ಇದ್ದರೆ ಮೈತ್ರಿ ಮಾಡಿಕೊಳ್ಳಬಹುದೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಡಿಸೆಂಬರ್ನಲ್ಲಿ ಲೋಕಸಭೆಗೆ ಚುನಾವಣೆ ಎದುರಾಗುವ ಸಾಧ್ಯತೆಗಳಿದ್ದು, ರಾಜ್ಯದಲ್ಲಿನ ಒಟ್ಟು 28 ಸ್ಥಾನಗಳ ಪೈಕಿ ಟಾರ್ಗೆಟ್ 25 ನಿಗದಿಗೊಳಿಸಿ ಚುನಾವಣೆ ತಂತ್ರ ರಚಿಸಲಾಗುತ್ತಿದೆ. ಜೆಡಿಎಸ್ ಜತೆಗಿನ ಮೈತ್ರಿ ಸಂಬಂಧ ಸೀಟುಗಳ ಹಂಚಿಕೆ ಇನ್ನಷ್ಟೇ ಬಗೆಹರಿಯಬೇಕಿದೆ. ಈ ಸಂಬಂಧ ಎರಡೂ ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಆ.13ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ರಾಹುಲ್ ಪ್ರವಾಸವನ್ನು ಚುನಾವಣೆ ಪ್ರಚಾರದ ಭಾಗವಾಗಿಯೂ ಪರಿಗಣಿಸಬಹುದು. ದೇಶದಲ್ಲಿ ಕಾಂಗ್ರೆಸ್ ಮತ್ತೆ ಅಧಿ ಕಾರಕ್ಕೆ ಬರಬೇಕು. ರಾಹುಲ್ ಪ್ರಧಾನಿಯಾಗಬೇಕು ಎಂಬ ನಿಟ್ಟಿನಲ್ಲಿ ಪಕ್ಷದ ಪರವಾಗಿ ಎಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ